ಕೊಹ್ಲಿಗೆ ಇರಿಸು ಮುರಿಸು; ಪಂದ್ಯದ ಮಧ್ಯೆ ಕೊಹ್ಲಿಗೆ ಮುತ್ತು ಕೊಡಲು ಮುಂದಾದ ಅಭಿಮಾನಿ, ವಿಡಿಯೋ ವೈರಲ್!
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದ್ದು ಪಂದ್ಯದ ನಡುವೆ...

Published On :
ಹೈದರಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದ್ದು ಪಂದ್ಯದ ನಡುವೆ ಅಭಿಮಾನಿಯೊಬ್ಬ ನಾಯಕ ವಿರಾಟ್ ಕೊಹ್ಲಿಗೆ ಮುತ್ತು ನೀಡಲು ಯತ್ನಿಸಿದ ಘಟನೆ ನಡೆದಿದೆ.
ಕ್ರೀಡಾಂಗಣದಲ್ಲಿ ಸಾಕಷ್ಟು ಭದ್ರತೆ ಇದ್ದರೂ ಕೂಡ ಸಿಬ್ಬಂದಿಯ ಕಣ್ತಪ್ಪಿಸಿ ಅಭಿಮಾನಿಯೊಬ್ಬ ಪಂದ್ಯದ 15ನೇ ಓವರ್ ವೇಳೆ ಮೈದಾನಕ್ಕೆ ನುಗ್ಗಿದ್ದಾನೆ. ಈ ವೇಳೆ ನೇರ ಕೊಹ್ಲಿ ಬಳಿ ಬಂದ ಆತ ಮೊದಲಿಗೆ ಸೆಲ್ಫಿ ತೆಗೆದುಕೊಂಡಿದ್ದು ನಂತರ ಕೊಹ್ಲಿಯನ್ನು ಅಪ್ಪಿಕೊಂಡು ಕಿಸ್ ಮಾಡಲು ಯತ್ನಿಸಿದ್ದ ಅಭಿಮಾನಿಯ ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಘಟನೆ ವೇಳೆ ಅಭಿಮಾನಿಯಿಂದ ಅಂತರ ಕಾಯ್ದುಕೊಂಡ ವಿರಾಟ್ ಕೊಹ್ಲಿ ಭದ್ರತಾ ಸಿಬ್ಬಂದಿ ಬರುವವರೆಗೂ ಅಲ್ಲಿಯೇ ನಿಂತಿದ್ದರು. ಇದರಿಂದ ಕೊಹ್ಲಿ ಕೆಲ ಕಾಲ ಮುಜುಗರಕ್ಕೆ ಒಳಗಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


