10 ವಿಕೆಟ್ ಕಿತ್ತು ದಾಖಲೆ ಬರೆದ ಉಮೇಶ್ ಯಾದವ್, ವಿಡಿಯೋ!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ಕೈವಶ ಮಾಡಿಕೊಂಡಿದ್ದು ಇದರ ಮಧ್ಯೆ ವೇಗಿ ಉಮೇಶ್ ಯಾದವ್ 10 ವಿಕೆಟ್ ಕಿತ್ತು ದಾಖಲೆ ಬರೆದಿದ್ದಾರೆ...

Published On :
ಹೈದರಾಬಾದ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ಕೈವಶ ಮಾಡಿಕೊಂಡಿದ್ದು ಇದರ ಮಧ್ಯೆ ವೇಗಿ ಉಮೇಶ್ ಯಾದವ್ 10 ವಿಕೆಟ್ ಕಿತ್ತು ದಾಖಲೆ ಬರೆದಿದ್ದಾರೆ.
ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಉಮೇಶ್ ಯಾದವ್ ಪಂದ್ಯವೊಂದರಲ್ಲಿ 10 ವಿಕೆಟ್ ಪಡೆದಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ಪಡೆದಿದ್ದ ಉಮೇಶ್ ಎರಡನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆದು ಒಟ್ಟಾರೆ 10 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಪಂದ್ಯವೊಂದರಲ್ಲಿ 10 ವಿಕೆಟ್ ಪಡೆದ ಸಾಧನೆ ಮಾಡಿದ 7ನೇ ಆಟಗಾರ ಎಂಬ ಖ್ಯಾತಿಗೆ ಉಮೇಶ್ ಯಾವದ್ ಭಾಜನರಾಗಿದ್ದಾರೆ. ಟೀಂ ಇಂಡಿಯಾ ಮೊದಲ ವಿಶ್ವಕಪ್ ಗೆಲುವಿನ ತಂಡದ ನೇತೃತ್ವ ವಹಿಸಿದ್ದ ಕಪಿಲ್ ದೇವ್ ಮೊದಲ ಬಾರಿಗೆ 10 ವಿಕೆಟ್ ಪಡೆದ ಸಾಧನೆ ಮಾಡಿದ ಭಾರತೀಯನಾಗಿದ್ದಾರೆ. ನಂತರ ಚೇತನ್ ಶರ್ಮಾ, ವೆಂಕಟೇಶ್ ಪ್ರಸಾದ್, ಶ್ರೀನಾಥ್, ಇರ್ಫಾನ್ ಫಠಾನ್, ಇಶಾಂತ್ ಶರ್ಮಾ, ಜಹೀರ್ ಖಾನ್ ಈ ಸಾಧನೆ ಮಾಡಿದ ಆಟಗಾರರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


