ಕ್ರಿಕೆಟ್

ಶ್ರೀಲಂಕಾದ ಕ್ರಿಕೆಟ್ ದಿಗ್ಗಜ ಸನತ್ ಜಯಸೂರ್ಯ ಐಸಿಸಿ ಕೆಂಗಣ್ಣಿಗೆ ಗುರಿಯಾಗಿದ್ದೇಕೆ?

ಶ್ರೀಲಂಕಾದ ಕ್ರಿಕೆಟ್ ದಿಗ್ಗಜ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಸನತ್ ಜಯಸೂರ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಕೆಂಗಣ್ಣಿಗೆ ಗುರಿಯಾಗಿದ್ದಾರೆ...

ಶ್ರೀಲಂಕಾದ ಕ್ರಿಕೆಟ್ ದಿಗ್ಗಜ ಸನತ್ ಜಯಸೂರ್ಯ ಐಸಿಸಿ ಕೆಂಗಣ್ಣಿಗೆ ಗುರಿಯಾಗಿದ್ದೇಕೆ?
ಸನತ್ ಜಯಸೂರ್ಯ
Published On :
ಕೊಲಂಬೋ: ಶ್ರೀಲಂಕಾದ ಕ್ರಿಕೆಟ್ ದಿಗ್ಗಜ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಸನತ್ ಜಯಸೂರ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಕೆಂಗಣ್ಣಿಗೆ ಗುರಿಯಾಗಿದ್ದಾರೆ. 
ಹೌದು ಐಸಿಸಿ ಭ್ರಷ್ಟಾಚಾರ ನಿಗ್ರಹ ಜಯಸೂರ್ಯ ವಿರುದ್ಧ ಸಂಹಿತೆ ಉಲ್ಲಂಘನೆ ಆರೋಪದಡಿ ಎರಡು ಪ್ರಕರಣಗಳನ್ನು ದಾಖಲಿಸಿದೆ. ಐಸಿಸಿ ನೀತಿ ಸಂಹಿತೆ ವಿಧಿ 2.4.6 ಮತ್ತು 2.4.7ರ ಅಡಿಯಲ್ಲಿ ಭ್ರಷ್ಟಾಚಾರ ನಿಗ್ರಹ ಪ್ರಕರಣಗಳನ್ನು ದಾಖಲಿಸಿದ್ದು ಯಾವ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂದು ಐಸಿಸಿ ಬಹಿರಂಗಪಡಿಸಿಲ್ಲ. 
ಐಸಿಸಿಯೊಂದಿಗೆ ಸಹಕರಿಸಲು ವಿಫಲ ಅಥವಾ ನಿರಾಕರಣೆ ಮತ್ತು ಭ್ರಷ್ಟಾಚಾರ ನಿಗ್ರಹ ಘಟಕ ನಡೆಸುವ ತನಿಖೆಗೆ ಅಡ್ಡಿ ಅಥವಾ ವಿಳಂಬ ಮಾಡುವಿಕೆಗೆ ಸಂಬಂಧಿಸಿದಂತೆ ಆರೋಪ ಮಾಡಲಾಗಿದೆ ಎನ್ನಲಾಗಿದೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಜಯಸೂರ್ಯಗೆ ಐಸಿಸಿ ಅಕ್ಟೋಬರ್ 15ರಿಂದ ಎರಡು ವಾರಗಳ ಸಮಯ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.