ಕ್ರಿಕೆಟ್

ವಿಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ; ರಿಷಬ್ ಪಂತ್ ಗೆ ಚೊಚ್ಚಲ ಪಂದ್ಯ

ವೆಸ್ಟ್‌ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ 12 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಉದಯೋನ್ಮುಖ....

ವಿಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ; ರಿಷಬ್ ಪಂತ್ ಗೆ ಚೊಚ್ಚಲ ಪಂದ್ಯ
ವಿರಾಟ್ ಕೊಹ್ಲಿ
Published On :
ಗುವಾಹಟಿ: ವೆಸ್ಟ್‌ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ 12 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಉದಯೋನ್ಮುಖ ವಿಕೆಟ್ ಕೀಪರ್, ಬ್ಯಾಟ್ಸ್‌ ಮನ್ ರಿಷಭ್ ಪಂತ್ ಅವರು ಸ್ಥಾನ ಪಡೆದಿದ್ದಾರೆ. ಆದರೆ ಕೆಎಲ್ ರಾಹುಲ್ ಮತ್ತು ಮನೀಷ್ ಪಾಂಡೆ ಸ್ಥಾನ ಪಡೆಯುವಲ್ಲಿ ಮತ್ತೆ ವಿಫಲವಾಗಿದ್ದಾರೆ.
ಟೀಂ ಇಂಡಿಯಾ ಅಕ್ಟೋಬರ್ 21 ರಿಂದ ನವಂಬರ್ 1 ರವರೆಗೆ ವಿಂಡೀಸ್ ವಿರುದ್ಧ ಐದು ಏಕದಿನ ಪಂದ್ಯಗಳನ್ನಾಡಲಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂದು ಮೊದಲ ಪಂದ್ಯದ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ.
ನಾಯಕ ವಿರಾಟ್ ಕೊಹ್ಲಿ ಜೊತೆಗೆ ಹಿರಿಯ ಅನುಭವಿ ಆಟಗಾರ ಮಹೇಂದ್ರ ಸಿಂಗ್ ಧೋನಿ ತಂಡದಲ್ಲಿದ್ದಾರೆ. ಓಪನರ್‌ಗಳಾಗಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಬಲ ತುಂಬಲಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಅಂಬಟಿ ರಾಯುಡು ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದ್ದಾರೆ.  
ಭಾರತ ತಂಡ: 
1. ವಿರಾಟ್ ಕೊಹ್ಲಿ 
2. ಶಿಖರ್ ಧವನ್ 
3. ರೋಹಿತ್ ಶರ್ಮಾ 
4. ಅಂಬಟಿ ರಾಯುಡು 
5. ರಿಷಭ್ ಪಂತ್ 
6. ಮಹೇಂದ್ರ ಸಿಂಗ್ ಧೋನಿ 
7. ರವೀಂದ್ರ ಜಡೇಜಾ 
8. ಕುಲ್‌ದೀಪ್ ಯಾದವ್ 
9. ಯುಜ್ವೇಂದ್ರ ಚಹಲ್ 
10. ಉಮೇಶ್ ಯಾದವ್ 
11. ಮೊಹಮ್ಮದ್ ಶಮಿ 
12. ಸೈಯದ್ ಖಲೀಲ್ ಅಹ್ಮದ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.