ವೆಸ್ಟ್ ಇಂಡೀಸ್- ಭಾರತ ನಡುವಿನ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತದಿಂದ ಫೀಲ್ಡಿಂಗ್ ಆಯ್ಕೆ
ಟೆಸ್ಟ್ ಸರಣಿಯಲ್ಲಿ ವೆಸ್ಟ್ ಇಂಡಿಸ್ ತಂಡವನ್ನು ವೈಟ್ ವಾಷ್ ಮಾಡಿರುವ ಭಾರತ ತಂಡ, ಏಕದಿನ ಸರಣಿಯಲ್ಲೂ ಪ್ರಾಬಲ್ಯ ಮೆರೆಯುವ ಆತ್ಮವಿಶ್ವಾಸದೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ.

Published On :
ಗುವಾಹಟಿ: ಟೆಸ್ಟ್ ಸರಣಿಯಲ್ಲಿ ವೆಸ್ಟ್ ಇಂಡಿಸ್ ತಂಡವನ್ನು ವೈಟ್ ವಾಷ್ ಮಾಡಿರುವ ಭಾರತ ತಂಡ, ಏಕದಿನ ಸರಣಿಯಲ್ಲೂ ಪ್ರಾಬಲ್ಯ ಮೆರೆಯುವ ಆತ್ಮವಿಶ್ವಾಸದೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ.
ಅ.21 ರಂದು ಗುವಾಹಟಿಯಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಟಾಸ್ ಗೆದ್ದಿದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ತವರಿನಲ್ಲಿ ಒಟ್ಟಾರೆ ಆಡಿರುವ 9 ಪಂದ್ಯಗಳ ಪೈಕಿ 5 ಪಂದ್ಯಗಳನ್ನು ಭಾರತ ಗೆದ್ದಿದ್ದು, ವೆಸ್ಟ್ ಇಂಡೀಸ್ 2 ಪಂದ್ಯಗಳನ್ನು ಗೆದ್ದಿದ್ದರೆ ಇನ್ನು 2 ಪಂದ್ಯಗಳು ರದ್ದುಗೊಂಡಿದ್ದವು.
ಭಾರತದ ಬ್ಯಾಟಿಂಗ್ ಲೇನ್ ಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್ ಆಧಾರವಾಗಿದ್ದರೆ, ಮಧ್ಯಮ ಕ್ರಮಾಂಕದಲ್ಲಿ ಎಂಎಸ್ ಧೋನಿ, ರವೀಂದ್ರ ಜಡೇಜಾ, ರಿಷಭ್ ಪಂತ್ ಇರಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


