ಕೊಹ್ಲಿ, ರೋ'ಹಿಟ್' ಆರ್ಭಟ; ವಿಂಡೀಸ್ ವಿರುದ್ಧ 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿದ ಟೀಂ ಇಂಡಿಯಾ
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ...

Published On :
ಗುವಾಹಟಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಬರ್ಸಾಪರ ಕ್ರಿಕೆಟ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 322 ರನ್ ಪೇರಿಸಿತು. ವಿಂಡೀಸ್ ನೀಡಿದ 323 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಗೆ ನಾಯಕ ವಿರಾಟ್ ಕೊಹ್ಲಿ 140 ಹಾಗೂ ರೋಹಿತ್ ಶರ್ಮಾರ ಅಜೇಯ 152 ಭರ್ಜರಿ ಶತಕ ಗೆಲುವು ಸಾಧಿಸಲು ನೆರವಾಯಿತು.
ಟೀಂ ಇಂಡಿಯಾ ಇನ್ನು 47 ಎಸೆತಗಳು ಬಾಕಿ ಇರುವಂತೆ 326 ರನ್ ಪೇರಿಸುವ ಮೂಲಕ ಗೆಲುವಿನ ನಗೆ ಬೀರಿದರು.
ವೆಸ್ಟ್ ಇಂಡೀಸ್ ಪರ ಹೆಟ್ಮರ್ ಭರ್ಜರಿ ಬ್ಯಾಟಿಂಗ್ ಮಾಡಿ 78 ಎಸೆತಗಳಲ್ಲಿ ಆರು ಭರ್ಜರಿ ಸಿಕ್ಸರ್ ಹಾಗೂ ಆರು ಬೌಂಡರಿ ಸೇರಿ 106 ರನ್ ಬಾರಿಸಿದರು. ಇನ್ನು ಆರಂಭಿಕ ಆಟಗಾರ ಪೊವೆಲ್ ಸಹ 51 ರನ್ ಗಳಿಸಿದ್ದಾರೆ. ಹೋಪ್ 32, ಹೊಲ್ಡೇರ್ 38 ರನ್ ಗಳಿಸಿ ತಂಡ 300ರ ಗಡಿ ದಾಟಲು ನೆರವಾದರು.
ಭಾರತ ಪರ ಬೌಲಿಂಗ್ ನಲ್ಲಿ ಯಜುವೇಂದ್ರ ಚಹಾಲ್ 3, ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ತಲಾ 2 ವಿಕೆಟ್, ಅಹ್ಮದ್ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


