ಕ್ರಿಕೆಟ್

ಭಾರತ-ವಿಂಡೀಸ್ 2ನೇ ಏಕದಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯ

ಪ್ರವಾಸಿ ವೆಸ್ಟ್ ಇಂಡೀಸ್ ಮತ್ತು ಭಾರತ ತಂಡದ ನಡುವೆ ನಡೆದ 2ನೇ ಏಕದಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಗಿದೆ.

ಭಾರತ-ವಿಂಡೀಸ್ 2ನೇ ಏಕದಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯ
ಶತಕ ಸಿಡಿಸಿದ ಶಾಯ್ ಹೋಪ್, ವಿಕೆಟ್ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
Published On :

ವಿಶಾಖಪಟ್ಟಣ: ಪ್ರವಾಸಿ ವೆಸ್ಟ್ ಇಂಡೀಸ್ ಮತ್ತು ಭಾರತ ತಂಡದ ನಡುವೆ ನಡೆದ 2ನೇ ಏಕದಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಗಿದೆ.

ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ಇಂದು ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 322 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ವಿಂಡೀಸ್ ತಂಡ ನಿಗದಿತ 50 ಓವರ್ ಗಳಲ್ಲಿ  ವಿಕೆಟ್ ನಷ್ಟಕ್ಕೆ 321 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಜೇಯ 157 ರನ್ ಪೇರಿಸಿದರೆ, ಮಧ್ಯಮ ಕ್ರಮಾಂಕದ ಆಟಗಾರ ಅಂಬಾಟಿ ರಾಯುಡು ಸಮಯೋಚಿತ ಆಟವಾಡಿ 73 ರನ್ ಗಳಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು.

ಇನ್ನು ಭಾರತ ನೀಡಿದ ಬೃಹತ್ ಮೊತ್ತದ ಗುರಿಯನ್ನು ಬೆನ್ನು ಹತ್ತಿದ ವೆಸ್ಟ್ ಇಂಡೀಸ್ ತಂಡ ಆರಂಭದಲ್ಲೇ ಪೊವೆಲ್ ವಿಕೆಟ್ ಕಳೆದುಕೊಂಡು ಆಘಾತಕ್ಕೆ ಸಿಲುಕಿತ್ತು. ಬಳಿಕ ತಂಡದ ಮೊತ್ತ 4 ರನ್ ಗಳಾಗಿದ್ದಾಗ ಚಂದ್ರಪಾಲ್ ಹೇಮರಾಜ್ ವಿಕೆಟ್ ಕೀಳುವ ಮೂಲಕ ಭಾರತ ಪಂದ್ಯದ ಮೇಲೆ ಮೇಲುಗೈ ಸಾಧಿಸಿತು. ಆದರೆ ಆ ಬಳಿಕ ಬಂದ ಶಾಯ್ ಹೋಪ್ ಮತ್ತು ಶಿಮ್ರಾನ್ ಹೆಟ್ಮರ್ ಭಾರತೀಯ ಬೌಲರ್ ಗಳ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿದರು. ಶಾಯ್ ಹೋಪ್ ಅಜೇಯ 123 ರನ್ ಗಳಿಸಿದರೆ, ಹೆಟ್ಮರ್ 94 ರನ್ ಗಳಿಸಿ ಶತಕದಂಚಿನಲ್ಲಿ ವಿಕೆಟ್ ಒಪ್ಪಿಸಿದರು.

ಪಂದ್ಯದ ಅಂತಿಮ ಓವರ್ ನಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಗೆಲ್ಲಲು 14 ರನ್ ಗಳ ಅವಶ್ಯಕತೆ ಇತ್ತು. ಆದರೆ ವಿಂಡೀಸ್ ತಂಡ 13 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಅಂತಿಮ ಎಸೆತದಲ್ಲಿ 5 ರನ್ ಗಳ ಅವಶ್ಯಕತೆ ಇದ್ದಾಗ ಶಾಯ್ ಹೋಪ್ ಭರ್ಜರಿ ಸಿಕ್ಸರ್ ಎತ್ತಲು ಮುಂದಾದರು. ಆದರೆ ಚೆಂಡಿನ ಮೇಲೆ ನಿಯಂತ್ರಣ ಸಾಧಿಸಲಾಗದೇ ಪಾಯಿಂಟ್ ನತ್ತ ಭಾರಿಸಿದರು. ಈ ಚೆಂಡನ್ನು ಹಿಡಿಯಲು ಅಂಬಾಟಿ ರಾಯುಡು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ, ಪರಿಣಾಮ ಚೆಂಡು ಬೌಂಡರಿ ಗೆರೆ ದಾಟಿತ್ತು. ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.