ವೀಂಡಿಸ್ ವಿರುದ್ಧ ನಾಲ್ಕನೇ ಏಕದಿನ ಪಂದ್ಯ: ಜಯದ ಲಯಕ್ಕೆ ಮರಳಲು ಭಾರತ ಸಜ್ಜು
ವಾಣಿಜ್ಯ ರಾಜಧಾನಿ ಮುಂಬೈಯ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಇಂದು ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಏಕ ದಿನ ಪಂದ್ಯ ನಡೆಯಲಿದ್ದು, ಹಿಂದಿನ ಪಂದ್ಯದ ಸೋಲು ತೀರಿಸಿಕೊಂಡು ಜಯದ ಲಯಕ್ಕೆ ಮರಳು ಟೀಂ ಇಂಡಿಯಾ ಸಜ್ಜುಗೊಂಡಿದೆ.

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈಯ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಇಂದು ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಏಕ ದಿನ ಪಂದ್ಯ ನಡೆಯಲಿದ್ದು, ಹಿಂದಿನ ಪಂದ್ಯದ ಸೋಲು ತೀರಿಸಿಕೊಂಡು ಜಯದ ಲಯಕ್ಕೆ ಮರಳಲು ಟೀಂ ಇಂಡಿಯಾ ಸಜ್ಜುಗೊಂಡಿದೆ.
ಪುಣೆಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ವೆಸ್ಟ್ ಇಂಡೀಸ್, ನಾಲ್ಕನೇ ಏಕದಿನ ಪಂದ್ಯದಲ್ಲೂ ಗೆಲ್ಲುವ ವಿಶ್ವಾಸದಲ್ಲಿದೆ. ಅಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಸರಣಿಯಲ್ಲಿ ಸತತವಾಗಿ ಮೂರು ಶತಕ ಸಿಡಿಸಿದ್ದರೂ ಪಂದ್ಯ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇಂದು ಮತ್ತೆ ಶತಕ ಬಾರಿಸಿದೆ ಅದು ಮುಂಬೈ ಕ್ರಿಕೆಟ್ ಅಭಿಮಾನಿಗಳಿಗೆ ಅಪರೂಪದ ನೋಟವಾಗಲಿದೆ.
ಆದರೆ. ಭಾರತದ ಮಧ್ಯಮ ಕ್ರಮಾಂಕ ಒತ್ತಡ ಸಂದರ್ಭಗಳಲ್ಲಿ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲವಾಗುತ್ತಿದೆ. ಕೊಹ್ಲಿ ಹೊರತುಪಡಿಸಿದರೆ. ಅಂಬಟ್ಟಿ ರಾಯುಡು, ರಿಷಬ್ ಪಂತ್, ಮಹೇಂದ್ರ ಸಿಂಗ್ ಬ್ಯಾಟಿಂಗ್ ನಲ್ಲಿ ವಿಫಲತೆ ಎದುರಿಸುತ್ತಿದ್ದಾರೆ. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ, ಹಾಗೂ ಶಿಖರ್ ಧವನ್ ಸ್ಥಿರ ಪ್ರದರ್ಶನ ಕಾಯ್ದುಕೊಳ್ಳುವಲ್ಲಿ ಹಿಂದೆ ಬಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


