ಕ್ರಿಕೆಟ್

ರೋ'ಹಿಟ್' 21ನೇ ಭರ್ಜರಿ ಶತಕ, ಪಾಕ್‌ನ ಸಯೀದ್ ಅನ್ವರ್ ಶತಕ ದಾಖಲೆ ಮುರಿದ ರೋಹಿತ್!

ತವರು ನೆಲದಲ್ಲಿ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿದ್ದು ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ...

ರೋ'ಹಿಟ್' 21ನೇ ಭರ್ಜರಿ ಶತಕ, ಪಾಕ್‌ನ ಸಯೀದ್ ಅನ್ವರ್ ಶತಕ ದಾಖಲೆ ಮುರಿದ ರೋಹಿತ್!
ರೋಹಿತ್ ಶರ್ಮಾ
Published On :
ಮುಂಬೈ: ತವರು ನೆಲದಲ್ಲಿ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿದ್ದು ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. 
ಮುಂಬೈನಲ್ಲಿ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿ 98 ಎಸೆತದಲ್ಲಿ 13 ಬೌಂಡರಿ ಹಾಗೂ 1 ಸಿಕ್ಸರ್ ಸೇರಿದಂತೆ 100 ರನ್ ಬಾರಿಸಿ 21ನೇ ಶತಕ ಸಿಡಿಸಿದರು. 
ಈ ಮೂಲಕ ರೋಹಿತ್ ಶರ್ಮಾ ಪಾಕಿಸ್ತಾನದ ಆಟಗಾರ ಸಯೀದ್ ಅನ್ವರ್ ಅವರ ವೈಯಕ್ತಿಕ ಶತಕದ ದಾಖಲೆಯನ್ನು ಮುರಿದಿದ್ದಾರೆ. ಸಯೀದ್ ಅನ್ವರ್ 20 ಶತಕಗಳನ್ನು ಸಿಡಿಸಿದ್ದಾರೆ.
ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ನಲ್ಲಿ 21ನೇ ಶತಕ ಸಿಡಿಸಿದ್ದು ಇನ್ನು ಒಂದು ಶತಕ ಸಿಡಿಸಿದರೆ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಹರ್ಷಲ್ ಗಿಬ್ಸ್ ಶತಕ ದಾಖಲೆಯನ್ನು ಮುರಿಯುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.