2019ರ ವಿಶ್ವಕಪ್: ಹೆಂಡತಿ ಜತೆಯಿರಬೇಕು, ಪ್ರತ್ಯೇಕ ಬೋಗಿ ಮತ್ತು ತಿನ್ನಲು ಬಾಳೆಹಣ್ಣು!
2019ರ ಏಕದಿನ ವಿಶ್ವಕಪ್ ಗೆ ಇಂಗ್ಲೆಂಡ್ ಆತಿಥ್ಯ ವಹಿಸಲಿದ್ದು ಯಾರ್ ಯಾರು ವಿಶ್ವಕಪ್ ನಲ್ಲಿ ಆಡುತ್ತಾರೆ ಎಂಬುದು ಇನ್ನು ನಿರ್ಧಾರವಾಗಿಲ್ಲ...

Published On :
ಮುಂಬೈ: 2019ರ ಏಕದಿನ ವಿಶ್ವಕಪ್ ಗೆ ಇಂಗ್ಲೆಂಡ್ ಆತಿಥ್ಯ ವಹಿಸಲಿದ್ದು ಯಾರ್ ಯಾರು ವಿಶ್ವಕಪ್ ನಲ್ಲಿ ಆಡುತ್ತಾರೆ ಎಂಬುದು ಇನ್ನು ನಿರ್ಧಾರವಾಗಿಲ್ಲ. ಆದರೆ ಇಂಗ್ಲೆಂಡ್ ನಲ್ಲಿ ತಮಗೆ ಯಾವ ರೀತಿಯ ಸೌಕರ್ಯಗಳನ್ನು ಒದಗಿಸಬೇಕು ಎಂಬ ಬೇಡಿಕೆ ಪಟ್ಟಿಯನ್ನು ಟೀಂ ಇಂಡಿಯಾ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮುಂದಿಟ್ಟಿದೆ.
ಟೀಂ ಇಂಡಿಯಾ ತಂಡದ ಪ್ರತಿನಿಧಿಗಳು ತಂಡದ ಅವಲೋಕನ ಸಭೆಯಲ್ಲಿ ಬೇಡಿಕೆ ಪಟ್ಟಿಯನ್ನು ಮುಂದಿಟ್ಟಿದ್ದಾರೆ. ಪಟ್ಟಿಯಲ್ಲಿ ವಿಶ್ವಕಪ್ ಪಂದ್ಯಗಳನ್ನಾಡಲು ಹೋಗುವಾಗ ಜತೆಗೆ ಪತ್ನಿಯನ್ನೂ ಕರೆದುಕೊಂಡು ಹೋಗಲು ಅನುಮತಿ ನೀಡಬೇಕು. ಇಂಗ್ಲೆಂಡ್ ನಲ್ಲಿ ಪ್ರಯಾಣಿಸಲು ಕಾಯ್ದಿರಿಸಿದ ರೈಲ್ವೆ ಬೋಗಿಗಳು ಬೇಕು. ಕ್ರೀಡಾಪಟುಗಳಿಗೆ ತಿನ್ನಲು ಬಾಳೆಹಣ್ಣು ಮತ್ತು ತಂಗಲು ಜಿಮ್ ಇರುವ ಹೋಟೆಲ್ ಗಳು ಬೇಕು. ಇವೆ ಪಟ್ಟಿಯಲ್ಲಿರುವ ಪ್ರಧಾನ ಬೇಡಿಕೆಗಳು.
ಈ ಹಿಂದೆ ಇಂಗ್ಲೆಂಡ್ ಪ್ರವಾಸ ಪಂದ್ಯದಲ್ಲಿ ಭಾರತದ ಪ್ರದರ್ಶನ ಕಳಪೆಯಾಗಿದ್ದರಿಂದ ಬಿಸಿಸಿಐ ಅವಲೋಕನ ಸಭೆ ಕರೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


