ಕ್ರಿಕೆಟ್

ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಆರ್ . ಪಿ. ಸಿಂಗ್ ನಿವೃತ್ತಿ !

ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಆರ್. ಪಿ. ಸಿಂಗ್ ಇಂದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. 37 ವರ್ಷದ ಆರ್ . ಪಿ. ಸಿಂಗ್ ಎಡಗೈ ವೇಗಿಯಾಗಿದ್ದು, ನಿವೃತ್ತಿ ನಿರ್ಧಾರವನ್ನು ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ.

ಭಾರತ ಕ್ರಿಕೆಟ್ ತಂಡದ  ಮಾಜಿ  ವೇಗಿ ಆರ್ . ಪಿ. ಸಿಂಗ್ ನಿವೃತ್ತಿ !
ಆರ್ ಪಿ ಸಿಂಗ್
Published On :

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಆರ್. ಪಿ. ಸಿಂಗ್ ಇಂದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ  ನಿವೃತ್ತಿ ಘೋಷಿಸಿದ್ದಾರೆ.  37 ವರ್ಷದ ಆರ್ . ಪಿ. ಸಿಂಗ್  ಎಡಗೈ ವೇಗಿಯಾಗಿದ್ದು, ನಿವೃತ್ತಿ ನಿರ್ಧಾರವನ್ನು  ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ.

13 ವರ್ಷಗಳ ಹಿಂದೆ 2005 ಸೆಪ್ಟೆಂಬರ್ 4 ರಂದು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ಆರ್. ಪಿ. ಸಿಂಗ್,  ಇದು ನನ್ನ ಜೀವನದ ಅತ್ಯಂತ  ಮಹತ್ವದ ಕ್ಷಣಗಳಿಗೆ ಅಡಿಗಲ್ಲು ಹಾಕಿತ್ತು ಎಂದು ಸಿಂಗ್ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
2007ರಲ್ಲಿ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿ  ಆರ್. ಪಿ. ಸಿಂಗ್ ಹಿರೋ  ರೀತಿ  ಮಿಂಚಿದ್ದರು. ಇದೇ ವರ್ಷ  ಆಸ್ಟ್ರೇಲಿಯಾದ ಪರ್ತ್ ನಲ್ಲಿ  ನಡೆದ ಟೆಸ್ಟ್ ಪಂದ್ಯ ಜಯಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.