ಮತ್ತೆ ಬ್ಯಾಟಿಂಗ್ ವೈಫಲ್ಯ; ಮೊದಲ ಇನ್ನಿಂಗ್ಸ್‌ನಲ್ಲಿ 292 ರನ್‌ಗಳಿಗೆ ಟೀ ಇಂಡಿಯಾ ಆಲೌಟ್!
ಆತಿಥೇಯ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 292 ರನ್ ಗಳಿಗೆ ಆಲೌಟ್ ಆಗಿದೆ...

Published On :
ಲಂಡನ್: ಆತಿಥೇಯ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 292 ರನ್ ಗಳಿಗೆ ಆಲೌಟ್ ಆಗಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 332 ರನ್ ಗಳಿಗೆ ಆಲೌಟ್ ಆಯಿತು. ನಂತರ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಆಂಗ್ಲರ ಬೌಲಿಂಗ್ ದಾಳಿಗೆ ಬೆದರಿದ್ದು 292 ರನ್ ಗಳಿಗೆ ಆಲೌಟ್ ಆಗಿ 40 ರನ್ ಗಳ ಹಿನ್ನಡೆ ಅನುಭವಿಸಿದೆ.
ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ಪರ ಕೂಕ್ 71, ಮೊಹಿನ್ ಅಲಿ 50, ಜೋಸ್ ಬಟ್ಲರ್ 89 ಮತ್ತು ಸ್ಟುವರ್ಟ್ ಬ್ರಾಡ್ 38 ರನ್ ಗಳಿಸಿದ್ದಾರೆ.
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ರವೀಂದ್ರ ಜಡೇಜಾ 4 ಹಾಗೂ ಬುಮ್ರಾ ಮತ್ತು ಇಶಾಂತ್ ಶರ್ಮಾ ತಲಾ 3 ವಿಕೆಟ್ ಪಡೆದಿದ್ದಾರೆ.
ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಪರ ಬ್ಯಾಟಿಂಗ್ ನಲ್ಲಿ ಕೆಎಲ್ ರಾಹುಲ್ 37, ಪೂಜಾರ 37, ವಿರಾಟ್ ಕೊಹ್ಲಿ 49, ಹನುಮ ವಿಹಾರಿ 56 ಮತ್ತು ರವೀಂದ್ರ ಜಡೇಜಾ ಅಜೇಯ 86 ರನ್ ಗಳಿಸಿದ್ದಾರೆ.
ಇಂಗ್ಲೆಂಡ್ ಪರ ಬೌಲಿಂಗ್ ನಲ್ಲಿ ಆ್ಯಂಡ್ರೂಸನ್, ಸ್ಟೋಕ್ಸ್ ಮತ್ತು ಮೊಹಿನ್ ಅಲಿ ತಲಾ 2 ವಿಕೆಟ್ ಪಡೆದಿದ್ದು ಬ್ರಾಡ್, ಕುರ್ರನ್ ಮತ್ತು ರಶೀದ್ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


