ಸಂಕಷ್ಟದಲ್ಲಿದ್ದ ತಂಡಕ್ಕಾಗಿ ಗಾಯಗೊಂಡಿದ್ದರು ಒಂದೇ ಕೈಯಲ್ಲಿ ಬ್ಯಾಟಿಂಗ್, ವಿಡಿಯೋ ವೈರಲ್!
2018ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶ ಶ್ರೀಲಂಕಾ ವಿರುದ್ಧ 137 ರನ್ ಗಳಿಂದ ಭರ್ಜರಿ ಜಯ ಗಳಿಸಿರುವ ಬೆನ್ನಲ್ಲೇ ಇದೀಗ ಸಂಕಷ್ಟ ಎದುರಾಗಿದೆ...

Published On :
ದುಬೈ: 2018ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶ ಶ್ರೀಲಂಕಾ ವಿರುದ್ಧ 137 ರನ್ ಗಳಿಂದ ಭರ್ಜರಿ ಜಯ ಗಳಿಸಿರುವ ಬೆನ್ನಲ್ಲೇ ಇದೀಗ ಸಂಕಷ್ಟ ಎದುರಾಗಿದೆ.
ಬಾಂಗ್ಲಾ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ತಮಿಮ್ ಇಕ್ಬಾಲ್ ಬೆರಳಿಗೆ ಗಾಯ ಮಾಡಿಕೊಂಡು ಪೆವಿಲಿಯನ್ ಸೇರಿದ್ದರು. ಆದರೆ ಪಂದ್ಯದ 47ನೇ ಓವರ್ ನಲ್ಲಿ ಅನಿವಾರ್ಯವಾಗಿ ಇಕ್ಬಾಲ್ ಬ್ಯಾಟಿಂಗ್ ಮಾಡಬೇಕಾಯಿತು. ಈ ವೇಳೆ ಒಂದೇ ಕೈಯಲ್ಲಿ ಬ್ಯಾಟಿಂಗ್ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನು ಇಕ್ಬಾಲ್ ತಂಡಕ್ಕಾಗಿ ಒಂದೇ ಕೈಯಲ್ಲಿ ಬ್ಯಾಟಿಂಗ್ ಮಾಡಿರುವುದು ಕ್ರಿಕೆಟ್ ಅಭಿಮಾನಿಗಳ ಪ್ರಶಂಸೆಗೆ ಕಾರಣವಾಗಿದ್ದು ಈ ಕುರಿತು ಟ್ವೀಟ್ ಮಾಡಿರುವ ಹಲವು ಒಂದೇ ಕೈಯಲ್ಲಿ ಬ್ಯಾಟಿಂಗ್ ಮಾಡಿರುವುದು ನಿಜಕ್ಕೂ ಅಭಿನಂದನಾರ್ಹ. ಆತನ ಧೈರ್ಯ ಮೆಚ್ಚಲೇಬೇಕು ಎಂದು ಟ್ವೀಟಿಸಿದ್ದಾರೆ.
ಲಂಕಾ ವಿರುದ್ಧದ ಪಂದ್ಯದಲ್ಲಿ 46.5 ಓವರ್ ನಲ್ಲಿ ಬಾಂಗ್ಲಾದ 9ನೇ ವಿಕೆಟ್ ಪತನಗೊಂಡಿದ್ದು ಈ ಹಿನ್ನೆಲೆಯಲ್ಲಿ ಗಾಯಕೊಂಡಿದ್ದರು ದೃತಿಗೆಡದೆ ಇಕ್ಬಾಲ್ ಒಂದೇ ಕೈಯಲ್ಲಿ ಬ್ಯಾಟಿಂಗ್ ಮಾಡಿ ಸಹ ಆಟಗಾರನಿಗೆ ಸಾಥ್ ನೀಡಿದರು. ಅಂತಿಮವಾಗಿ 49.3 ಓವರ್ ಗಳಲ್ಲಿ ಬಾಂಗ್ಲಾ 261 ರನ್ ಗಳಿಗೆ ಆಲೌಟ್ ಆಯಿತು. ಇಕ್ಬಾಲ್ 2 ರನ್ ಗಳಿಸಿ ಅಜೇಯರಾಗಿ ಉಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Twitterಟ್ವೀಟರ್Sri Lankaಶ್ರೀಲಂಕಾಬಾಂಗ್ಲಾದೇಶBangladeshCricket OffbeatTamim Iqbalಕ್ರಿಕೆಟ್ ಸ್ವಾರಸ್ಯAsia Cup 2018ಏಷ್ಯಾಕಪ್ 2018ತಮಿಮ್ ಇಕ್ಬಾಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


