ಕ್ರಿಕೆಟ್

ಏಷ್ಯಾ ಕಪ್‌ನಲ್ಲಿ ವಿರಾಟ್ ಕೊಹ್ಲಿ ಆಡದಿದ್ದರೆ ಅದೇನು ದೊಡ್ಡ ವಿಷಯವಲ್ಲ: ಗಂಗೂಲಿ

2018ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಿದ್ದು ಟೂರ್ನಿಯಿಂದ ಟೀಂ ಇಂಡಿಯಾ ಖಾಯಂ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು ಕೊಹ್ಲಿ ಆಡದಿದ್ದರೆ...

ಏಷ್ಯಾ ಕಪ್‌ನಲ್ಲಿ ವಿರಾಟ್ ಕೊಹ್ಲಿ ಆಡದಿದ್ದರೆ ಅದೇನು ದೊಡ್ಡ ವಿಷಯವಲ್ಲ: ಗಂಗೂಲಿ
ಸೌರವ್ ಗಂಗೂಲಿ-ವಿರಾಟ್ ಕೊಹ್ಲಿ
Published On :
ನವದೆಹಲಿ: 2018ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಿದ್ದು ಟೂರ್ನಿಯಿಂದ ಟೀಂ ಇಂಡಿಯಾ ಖಾಯಂ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು ಕೊಹ್ಲಿ ಆಡದಿದ್ದರೆ ಅದೇನು ದೊಡ್ಡ ವಿಷಯವಲ್ಲ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ. 
ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹಾಂಕಾಂಗ್ ತಂಡವನ್ನು ಎದುರಳಿಸಿದ್ದು ನಾಳೆ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಸೆಣೆಸಲಿದೆ. ಟೀಂ ಇಂಡಿಯಾದಲ್ಲಿ ಕೊಹ್ಲಿ ಇಲ್ಲದಿರುವುದು ತಮಗೆ ಅನುಕೂಲವಾಗಲಿದೆ ಎಂದು ಈಗಾಗಲೇ ಕೆಲ ಪಾಕ್ ಆಟಗಾರರು ಹೇಳಿದ್ದಾರೆ. 
ಇದಕ್ಕೆ ಪ್ರತಿಕ್ರಿಯಿಸಿರುವ ಗಂಗೂಲಿ, ತಂಡದಲ್ಲಿ ವಿರಾಟ್ ಕೊಹ್ಲಿ ಇಲ್ಲಿದಿರುವುದು ಒಂದು ವಿಷಯವೇ ಅಲ್ಲ. ಅವರ ಅನುಪಸ್ಥಿತಿಯಲ್ಲೂ ತಂಡ ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯ ಹೊಂದಿದೆ. ಪಾಕ್ ತಂಡಕ್ಕೆ ಹೋಲಿಕೆ ಮಾಡಿದಾಗ ಭಾರತ ಎಲ್ಲ ವಿಭಾಗದಲ್ಲೂ ಬಲಿಷ್ಠವಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.