ಏಷ್ಯಾಕಪ್: ಟೀಂ ಇಂಡಿಯಾ ದಾಳಿಗೆ ಬಾಂಗ್ಲಾ ತತ್ತರ, 173 ರನ್ ಗೆ ಆಲೌಟ್
ಏಷ್ಯಾ ಕಪ್ 2018 ಪಂದ್ಯಾವಳಿಯ ಸೂಪರ್ ಪೋರ್ ಹಂತದ ಪಂದ್ಯದಲ್ಲಿ ಬಾಂಗ್ಲಾದೇಶ 50 ಓವರ್ ಗಳಲ್ಲಿ 173 ರನ್ ಗಳಿಸುವಷ್ಟರಲ್ಲೇ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ.

Published On :
ದುಬೈ: ಏಷ್ಯಾ ಕಪ್ 2018 ಪಂದ್ಯಾವಳಿಯ ಸೂಪರ್ ಪೋರ್ ಹಂತದ ಪಂದ್ಯದಲ್ಲಿ ಬಾಂಗ್ಲಾದೇಶ 50 ಓವರ್ ಗಳಲ್ಲಿ 173 ರನ್ ಗಳಿಸುವಷ್ಟರಲ್ಲೇ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ.
ಟಾಸ್ ಗೆದ್ದ ಟೀಮ್ ಇಂಡಿಯಾ ಫೀಲ್ಡಿಂಗ್ ಆಯ್ದುಕೊಂಡಿದ್ದು ಬಾಂಗ್ಲಾಗೆ ಮೊದಲು ಬ್ಯಾಟಿಂಗ್ ಅವಕಾಶ ನೀಡಿತು.
ಆದರೆ ಬ್ಯಾಟಿಂಗ್ ಗೆ ಇಳಿದ ಬಾಂಗ್ಲಾಗೆ ಉತ್ತಮ ಪ್ರಾರಂಭ ದಿರಕಿಸುವಲ್ಲಿ ಆರಂಭಿಕ ಆಟಗಾರರು ವಿಫಲರಾಗಿದ್ದರು.ದಾಸ್ ಮತ್ತು ನಜಮುಲ್ ಹೊಸೇನ್ ಇಬ್ಬರೂ ತಲಾ 7 ರನ್ ಗಳನ್ನಷ್ಟೇ ಗಳಿಸಲಷ್ಟೇ ಶಕ್ಯರಾದರು.
ಇನ್ನು ಬಾಂಗ್ಲಾ ಪರ ಮೆಹದಿ ಹಸನ್ 42 ರನ್ ಗಳಿಸಿದ್ದೇ ತಂಡದ ಅಟಗಾರರ ಪೈಕಿ ಗರಿಷ್ಠ ಸ್ಕೋರ್ ಗಳಿಕೆಯಾಗಿತ್ತು. ಉಳಿದಂತೆ ಮಹಮೂದುಲ್ಲಾ 25, ಮುಷ್ಫಿಕೂರ್ ರಹೀಮ್ 21 ಮಶ್ರಾಫೆ ಮೊರ್ತಾಜಾ 26 ರನ್ ಗಳಿಸಿದ್ದರೆ ಉಳಿದವರೆಲ್ಲ 20ರ ಗಡಿಯನ್ನೂ ತಲುಪಲಿಲ್ಲ.
ಹೀಗೆ ಒಟ್ಟಾರೆ 49.1 ಓವರ್ ಗಳಲ್ಲಿ ಬಾಂಗ್ಲಾ ಹತ್ತು ವಿಕೆಟ್ ನಷ್ಟಕ್ಕೆ 173ರನ್ ಕಲೆಹಾಕಿದೆ.
ಭಾರತದ ಭುವನೇಶ್ವರ್ ಕುಮಾರ್ ಮತ್ತು ಬೂಮ್ರಾ ತಲಾ 3 ರವೀಂದ್ರ ಜಡೇಜಾ 4 ವಿಕೆಟ್ ಪಡೆದು ಮಿಂಚಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


