ಇಂಗ್ಲೆಂಡ್ ಟೆಸ್ಟ್ ಸರಣಿಯನ್ನು ಕೈಯ್ಯಾರೆ ಕಳೆದುಕೊಂಡರು; ಕೊಹ್ಲಿ ಪಡೆ ವಿರುದ್ಧ ಕನ್ನಡಿಗ ದ್ರಾವಿಡ್ ಕೆಂಡ!
ಟೆಸ್ಟ್ ನಲ್ಲಿ ಬಲಿಷ್ಠ ತಂಡವಾಗಿದ್ದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಸುಲಭವಾಗಿ ಗೆಲ್ಲಬಹುದಿತ್ತು ಆದರೆ ತಮ್ಮ ಕೈಯ್ಯಾರೆ ಸರಣಿಯನ್ನು...

Published On :
ಮುಂಬೈ: ಟೆಸ್ಟ್ ನಲ್ಲಿ ಬಲಿಷ್ಠ ತಂಡವಾಗಿದ್ದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಸುಲಭವಾಗಿ ಗೆಲ್ಲಬಹುದಿತ್ತು ಆದರೆ ತಮ್ಮ ಕೈಯ್ಯಾರೆ ಸರಣಿಯನ್ನು ಕಳೆದುಕೊಂಡರು ಎಂದು ವಿರಾಟ್ ಕೊಹ್ಲಿ ಪಡೆ ವಿರುದ್ಧ ರಾಹುಲ್ ದ್ರಾವಿಡ್ ಬೇಸರ ವ್ಯಕ್ತಪಡಿಸಿದ್ದಾರೆ.
ಟೀಂ ಇಂಡಿಯಾ ಬೌಲಿಂಗ್ ನಲ್ಲಿ ಹಿಂದೆಗಿಂತಲೂ ಬಲಿಷ್ಠವಾಗಿತ್ತು. ಆದರೆ ಬ್ಯಾಟಿಂಗ್ ವೈಫಲ್ಯದಿಂದ ಟೀಂ ಇಂಡಿಯಾದಾಗಬೇಕಿದ್ದ ಸರಣಿ ಇಂಗ್ಲೆಂಡ್ ಪಾಲಾಯಿತು ಎಂದು ಭಾರತ ಎ ತಂಡದ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್ ಅಭಿಪ್ರಾಯ ಪಟ್ಟಿದ್ದಾರೆ.
ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಇಶಾಂತ್ ಶರ್ಮಾ 18, ಮೊಹಮ್ಮದ್ ಶಮಿ 16 ಹಾಗೂ ಜಸ್ಪ್ರೀತ್ ಬುಮ್ರಾ 14 ವಿಕೆಟ್ ಪಡೆದಿದ್ದಾರೆ. ಇನ್ನು ಅಶ್ವಿನ್ ಹಾಗೂ ಹಾರ್ದಿಕ್ ಪಾಂಡ್ಯ ಕೂಡ 10ಕ್ಕೂ ಹೆಚ್ಚು ವಿಕೆಟ್ ಪಡೆದು ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು.
ಆದರೆ ಬ್ಯಾಟಿಂಗ್ ನಲ್ಲಿ ವಿರಾಟ್ ಕೊಹ್ಲಿಯನ್ನು ಬಿಟ್ಟರೆ ಮತ್ಯಾವ ಬ್ಯಾಟ್ಸ್ ಮನ್ ಕೂಡ ಇಂಗ್ಲೆಂಡ್ ಬೌಲರ್ ಗಳ ವಿರುದ್ಧ ಬ್ಯಾಟ್ ಬೀಸಲು ತಿಣುಕಾಡಿದರು. ಬ್ಯಾಟ್ಸ್ ಮನ್ ಗಳು ಬೌಲರ್ ಗಳ ಬೆನ್ನಿಗೆ ನಿಂತಿದ್ದರೆ 4-1ರಲ್ಲಿ ಟೆಸ್ಟ್ ಗೆಲ್ಲಬಹುದಿತ್ತು ಎಂದು ದ್ರಾವಿಡ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿTestಟೆಸ್ಟ್ಇಂಗ್ಲೆಂಡ್EnglandRahul Dravidರಾಹುಲ್ ದ್ರಾವಿಡ್Asia Cup 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


