ಕ್ರಿಕೆಟ್

ಪಾಕ್‌ಗೆ ಹೆದರಿ ಏಷ್ಯಾ ಕಪ್‌ನಿಂದ ಕೊಹ್ಲಿಗೆ ವಿಶ್ರಾಂತಿ? ಕೊಹ್ಲಿ ಟೀಕಿಸಿದ್ದ ಪಾಕ್ ಆಟಗಾರನ ಬೆವರಿಳಿಸಿದ ಗಂಭೀರ್!

ಗಾಯದ ಸಮಸ್ಯೆಯಿಂದಾಗಿ ಟೀಂ ಇಂಡಿಯಾದ ಖಾಯಂ ನಾಯಕ ವಿರಾಟ್ ಕೊಹ್ಲಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಿಂದ ಹೊರಗುಳಿದಿದ್ದು ಆದರೆ ಪಾಕ್ ಮಾಜಿ ಕ್ರಿಕೆಟಿಗನೊಬ್ಬ...

ಪಾಕ್‌ಗೆ ಹೆದರಿ ಏಷ್ಯಾ ಕಪ್‌ನಿಂದ ಕೊಹ್ಲಿಗೆ ವಿಶ್ರಾಂತಿ? ಕೊಹ್ಲಿ ಟೀಕಿಸಿದ್ದ ಪಾಕ್ ಆಟಗಾರನ ಬೆವರಿಳಿಸಿದ ಗಂಭೀರ್!
ವಿರಾಟ್ ಕೊಹ್ಲಿ-ಗೌತಮ್ ಗಂಭೀರ್
Published On :
ದುಬೈ: ಗಾಯದ ಸಮಸ್ಯೆಯಿಂದಾಗಿ ಟೀಂ ಇಂಡಿಯಾದ ಖಾಯಂ ನಾಯಕ ವಿರಾಟ್ ಕೊಹ್ಲಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಿಂದ ಹೊರಗುಳಿದಿದ್ದು ಆದರೆ ಪಾಕ್ ಮಾಜಿ ಕ್ರಿಕೆಟಿಗನೊಬ್ಬ ಪಾಕ್ ವಿರುದ್ಧ ಆಡುವ ಭಯದಿಂದ ನೀವು ಏಷ್ಯಾಕಪ್ ನಿಂದ ದೂರ ಉಳಿದಿದ್ದಾರೆ ಎಂದು ಟೀಕಿಸಿದ್ದು ಇದಕ್ಕೆ ಗೌತಮ್ ಗಂಭೀರ್ ತೀವ್ರ ತಿರುಗೇಟು ನೀಡಿದ್ದಾರೆ. 
ಪಾಕ್ ತಂಡದ ಮಾಜಿ ಕ್ರಿಕೆಟಿಗ ತನ್ವೀರ್ ಅಹಮ್ಮದ್, ಪಾಕಿಸ್ತಾನ ವಿರುದ್ಧ ಮೂರು ಪಂದ್ಯಗಳನ್ನು ಆಡಬೇಕಿರುವುದರಿಂದ ಏಷ್ಯಾಕಪ್ ನಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಬೆನ್ನು ನೋವಿನ ನಡುವೆ ಇಂಗ್ಲೆಂಡ್ ನಲ್ಲಿ ಆಡಲು ಸಾಧ್ಯವಾದರೆ, ಏಷ್ಯಾಕಪ್ ನಲ್ಲಿ ಯಾಕೆ ಆಗಲ್ಲ ಎಂದು ಪ್ರಶ್ನಿಸಿದ್ದಾರೆ. 
ತನ್ವೀರ್ ಟೀಕೆಗೆ ತಿರುಗೇಟು ನೀಡಿರುವ ಟೀಂ ಇಂಡಿಯಾದ ಆಟಗಾರ ಗೌತಮ್ ಗಂಭೀರ್ ವಿರಾಟ್ ಕೊಹ್ಲಿ ಈಗಾಗಲೇ ಏಕದಿನ ಕ್ರಿಕೆಟ್ ನಲ್ಲಿ 35-36 ಸೆಂಚೂರಿ ಬಾರಿಸಿದ್ದು ಅವರ ಸಾಮರ್ಥ್ಯ ತೋರಿಸಿದ್ದಾರೆ. ಕೊಹ್ಲಿ ಬಾರಿಸಿರುವಷ್ಟು ಅಂತಾರಾಷ್ಟ್ರೀಯ ಪಂದ್ಯಗಳನ್ನು ನೀವು ಆಡಿದ್ದೀರಾ ಎಂದು ಮರು ಪ್ರಶ್ನೆ ಹಾಕಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.