ಪಾಕ್ ವಿರುದ್ಧ ವಿರೋಚಿತ ಸೋಲಿನ ಬಳಿಕ ಕಣ್ಣೀರಿಟ್ಟ ಆಫ್ಘಾನ್ ಆಟಗಾರರು, ಅಭಿಮಾನಿಗಳ ಮನಕಲುಕಿದ ದೃಶ್ಯ!
ಕ್ರಿಕೆಟ್ ನ ಶಿಶು ಎಂದು ಕರೆಸಿಕೊಳ್ಳುತ್ತಿದ್ದ ಆಫ್ಘಾನಿಸ್ತಾನ ಇದೀಗ ಪ್ರಬಲ ತಂಡಗಳಿಗೆ ಕಂಟಕವಾಗಿ ಪರಿಣಮಿಸಿದೆ. ಇನ್ನು ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯ...

Published On :
ದುಬೈ: ಕ್ರಿಕೆಟ್ ನ ಶಿಶು ಎಂದು ಕರೆಸಿಕೊಳ್ಳುತ್ತಿದ್ದ ಆಫ್ಘಾನಿಸ್ತಾನ ಇದೀಗ ಪ್ರಬಲ ತಂಡಗಳಿಗೆ ಕಂಟಕವಾಗಿ ಪರಿಣಮಿಸಿದೆ. ಇನ್ನು ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯ ಸೋಲಿನ ಬಳಿಕ ಆಫ್ಘಾನ್ ಆಟಗಾರರು ಕಣ್ಣೀರಿಟ್ಟಿದ್ದು ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿದ್ದಾರೆ.
ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ನಲ್ಲಿ ಪಾಕಿಸ್ತಾನ ವಿರುದ್ಧ 3 ವಿಕೆಟ್ ಗಳಿಂದ ವಿರೋಚಿತ ಸೋಲು ಕಂಡಿತ್ತು. ಪಂದ್ಯದ ಕೊನೆಯ ಓವರ್ ವರೆಗೂ ಕಠಿಣ ಸ್ಪರ್ಧೆ ನೀಡಿದ್ದ ಆಫ್ಘಾನಿಸ್ತಾನ ಕೊನೆಗೂ ಪಾಕಿಸ್ತಾನ ವಿರುದ್ಧ ಸೋಲು ಕಂಡಿತ್ತು.
ಪಂದ್ಯ ಸೋಲಿನ ಬಳಿಕ ಆಫ್ಘಾನ್ ಆಟಗಾರರು ಬೇಸರದಿಂದ ಮೈದಾನದಲ್ಲೇ ಕಣ್ಣೀರಿಟ್ಟಿದ್ದರು. ಈ ವೇಳೆ ಬ್ಯಾಟಿಂಗ್ ಮಾಡುತ್ತಿದ್ದ ಪಾಕಿಸ್ತಾನದ ಶೋಯಬ್ ಮಲಿಕ್ ಆಫ್ಘಾನ್ ಆಟಗಾರರಿಗೆ ಸಾಂತ್ವನ ಹೇಳಿದ್ದಾರೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಫ್ಘಾನಿಸ್ತಾನ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 257 ರನ್ ಪೇರಿಸಿತ್ತು. 258 ರನ್ ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ 49.3 ಓವರ್ ನಲ್ಲಿ 258 ರನ್ ಬಾರಿಸಿ ಗೆಲುವಿನ ನಗೆ ಬೀರಿತ್ತು.
Well played #ShoaibMalik bt afg also deserve
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Twitterಟ್ವೀಟರ್Afghanistanಆಫ್ಘಾನಿಸ್ತಾನShoaib MalikAsia Cup 2018ಏಷ್ಯಾಕಪ್ ಕ್ರಿಕೆಟ್ಶೋಯಬ್ ಮಲಿಕ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


