ಅಫ್ಘಾನಿಸ್ಥಾನ ವಿರುದ್ಧದ ಪಂದ್ಯ: ಭಾರತದ ಗೆಲುವಿಗೆ ಮುಳುವಾದ ಅಂಪೈರ್ ವೈಫಲ್ಯದ ಬಗ್ಗೆ ಧೋನಿ ಹೇಳಿದ್ದು?
ಏಷ್ಯಾಕಪ್ 2018 ರ ಅಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ ಭಾರತದ ಗೆಲುವಿಗೆ ಮುಳುವಾಗಿದ್ದು, ಅಂಪೈರ್ ನ ತಪ್ಪು ನಿರ್ಧಾರಗಳೇ ಕಾರಣವಾಗಿದ್ದು, ಈ ಬಗ್ಗೆ ಎಂಎಸ್ ಧೋನಿ ಮೌನ ಮುರಿದಿದ್ದಾರೆ.

Published On :
ದುಬೈ: ಏಷ್ಯಾಕಪ್ 2018 ರ ಅಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ ಭಾರತದ ಗೆಲುವಿಗೆ ಮುಳುವಾಗಿದ್ದು, ಅಂಪೈರ್ ನ ತಪ್ಪು ನಿರ್ಧಾರಗಳೇ ಕಾರಣವಾಗಿದ್ದು, ಈ ಬಗ್ಗೆ ಎಂಎಸ್ ಧೋನಿ ಮೌನ ಮುರಿದಿದ್ದಾರೆ.
ಅಂಪೈರ್ ಗಳ ತಪ್ಪು ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಂಎಸ್ ಧೋನಿ "ನನಗೆ ದಂಡ ಪಾವತಿಸುವುದು ಬೇಕಿಲ್ಲ" ಎಂದು ಹೇಳುವ ಮೂಲಕ ಅಂಪೈರ್ ಗಳ ತಪ್ಪು ನಿರ್ಧಾರದ ಬಗ್ಗೆ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭಾರತದ ಇನ್ನಿಂಗ್ಸ್ ನ 26ನೇ ಓವರ್ ನಲ್ಲಿ ಧೋನಿ ಜಾವೆದ್ ಅಹ್ಮಾದಿ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದರು ಔಟ್ ಆದರು. ಆದರೆ ಟಿವಿ ರಿಪ್ಲೆ ನಲ್ಲಿ ಧೋನಿ ಔಟ್ ಆಗಿರಲಿಲ್ಲ. ಅಹ್ಮಾದಿ ಎಸೆದ ಚೆಂಡು ಲೆಗ್ ಸ್ಟಂಪ್ ನಿಂದ ಆಚೆಗೆ ಹೋಗಿತ್ತು, ಈ ವಿಚಾರ ಧೋನಿಗೆ ತಿಳಿದಿತ್ತಾದರೂ, ರಿವ್ಯೂ ಅವಕಾಶ ಇಲ್ಲವಾಗಿದ್ದರಿಂದ ಧೋನಿಗೆ ರಿವ್ಯೂ ಪಡೆಯದೇ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದರು. ಅಂತೆಯೇ 44 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ಕಾರ್ತಿಕ್ ಕೂಡ ನಬಿ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದು ಔಟ್ ಆಗಿದ್ದರು. ಆದರೆ ಇದೂ ಕೂಡ ಔಟ್ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MS Dhoniಎಂಎಸ್ ಧೋನಿಅಫ್ಘಾನಿಸ್ಥಾನAsia Cup 2018ಏಷ್ಯಾ ಕಪ್ 2018Afghanistan matchUmpiring howlersಅಂಪೈರಿಂಗ್ ವೈಫಲ್ಯ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


