ಕ್ರಿಕೆಟ್

ಐಸಿಸಿ ಮಹಿಳಾ ಟಿ20 ವಿಶ್ವಕಪ್: ಟೀಂ ಇಂಡಿಯಾ ತಂಡ ಪ್ರಕಟಿಸಿದ ಬಿಸಿಸಿಐ!

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮಹಿಳಾ ಟಿ20 ವಿಶ್ವಕಪ್ ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ...

ಐಸಿಸಿ ಮಹಿಳಾ ಟಿ20 ವಿಶ್ವಕಪ್: ಟೀಂ ಇಂಡಿಯಾ ತಂಡ ಪ್ರಕಟಿಸಿದ ಬಿಸಿಸಿಐ!
ಟೀಂ ಇಂಡಿಯಾ
Published On :
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮಹಿಳಾ ಟಿ20 ವಿಶ್ವಕಪ್ ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 
2018ರ ನವೆಂಬರ್ ತಿಂಗಳಲ್ಲಿ ಆರಂಭಗೊಳ್ಳಲಿರುವ ಟಿ20 ವಿಶ್ವಕಪ್ ನಲ್ಲಿ ಭಾರತ ಮಹಿಳಾ ತಂಡವನ್ನು ಹರ್ಮನ್ ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಇನ್ನು 15 ಆಟಗಾರರನ್ನೊಳಗೊಂಡ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. 
ಟೀಂ ಇಂಡಿಯಾ ಮಹಿಳಾ ತಂಡ
ಹರ್ಮನ್ ಪ್ರೀತ್ ಕೌರ್(ನಾಯಕಿ), ಸ್ಮೃತಿ ಮಂದಾನಾ(ಉಪನಾಯಕಿ), ಮಿಥಾಲಿ ರಾಜ್, ಜೆಮಿಕಾ ರೊಡ್ರಿಗಜ್, ವೇದಾ ಕೃಷ್ಣಮೂರ್ತಿ, ದೀಪ್ತಿ ಶರ್ಮಾ, ತನ್ಯಾ ಭಾಟಿಯಾ(ವಿಕೆಟ್ ಕೀಪರ್), ಪೂನಂ ಯಾದವ್, ರಾಧಾ ಯಾದವ್, ಅಂಜು ಪಾಟೀಲ್, ಏಕ್ತಾ ಬಿಸ್ತಾ, ಡಿ ಹೇಮಲತಾ, ಮಾನ್ಸಿ ಜೋಶಿ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ. 
ಟೀಂ ಇಂಡಿಯಾ ವೇಳಾಪಟ್ಟಿ:
* ನ.9, ಭಾರತ-ನ್ಯೂಜಿಲೆಂಜ್, ಗಯಾನಾ
* ನ.11, ಭಾರತ-ಪಾಕಿಸ್ತಾನ್, ಗಯಾನಾ
* ನ.15, ಭಾರತ-ಐರ್ಲೆಂಡ್, ಗಯಾನಾ
* ನ.17, ಭಾರತ-ಆಸ್ಟ್ರೇಲಿಯಾ, ಗಯಾನಾ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.