ಏಷ್ಯಾ ಕಪ್ ಚಾಂಪಿಯನ್ ಬೆನ್ನಲ್ಲೇ ಯಶಸ್ವಿ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಏರಿಕೆ!
ಟೀಂ ಇಂಡಿಯಾ 2018ರ ಏಷ್ಯಾ ಕಪ್ ಚಾಂಪಿಯನ್ ಆಗಿ ಹೊರ ಹೊಮ್ಮಿದ ಬೆನ್ನಲ್ಲೇ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ರೋಹಿತ್ ಶರ್ಮಾ ಇದೀಗ ಐಸಿಸಿ ರ್ಯಾಂಕಿಂಗ್...

Published On :
ದುಬೈ: ಟೀಂ ಇಂಡಿಯಾ 2018ರ ಏಷ್ಯಾ ಕಪ್ ಚಾಂಪಿಯನ್ ಆಗಿ ಹೊರ ಹೊಮ್ಮಿದ ಬೆನ್ನಲ್ಲೇ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ರೋಹಿತ್ ಶರ್ಮಾ ಇದೀಗ ಐಸಿಸಿ ರ್ಯಾಂಕಿಂಗ್ ನಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.
ಟೀಂ ಇಂಡಿಯಾದ ಖಾಯಂ ನಾಯಕ ವಿರಾಟ್ ಕೊಹ್ಲಿ 884 ಅಂಕಗಳೊಂದಿಗೆ ಏಕದಿನ ಬ್ಯಾಟಂಗ್ ನಲ್ಲಿ ಅಗ್ರಸ್ಥಾನದಲ್ಲಿದ್ದು ರೋಹಿತ್ ಶರ್ಮಾ 842 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೇರಿದ್ದಾರೆ. ಇನ್ನು ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಶಿಖರ್ ಧವನ್ 802 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.
ಇನ್ನು ಏಕದಿನ ಬೌಲಿಂಗ್ ನಲ್ಲಿ ಜಸ್ ಪ್ರೀತ್ ಬುಮ್ರಾ 797 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಭದ್ರವಾಗಿದ್ದಾರೆ. ಟೀಂ ಇಂಡಿಯಾದ ಯುವ ಸ್ಪಿನ್ನರ್ ಚೈನಾಮನ್ ಖ್ಯಾತಿಯ ಕುಲದೀಪ್ ಯಾದವ್ 700 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaRohit Sharmaರೋಹಿತ್ ಶರ್ಮಾಏಕದಿನ ರ್ಯಾಂಕಿಂಗ್Shikhar Dhawanಶಿಖರ್ ಧವನ್ODI RankingAsia Cup 2018ಏಷ್ಯಾ ಕಪ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


