ನಿಧಾನಗತಿಯ ಬೌಲಿಂಗ್ ಅಂಜಿಕ್ಯಾ ರಹಾನೆಗೆ ಬಿತ್ತು ಭಾರಿ ದಂಡ!
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದ ಹಿನ್ನೆಲೆಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಅಜಿಂಕ್ಯಾ ರಹಾನೆ ಅವರಿಗೆ ಭಾರಿ ದಂಡ ವಿಧಿಸಲಾಗಿದೆ.

Published On :
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದ ಹಿನ್ನೆಲೆಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಅಜಿಂಕ್ಯಾ ರಹಾನೆ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ಭಾನುವಾರ ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 12 ನೇ ಆವೃತ್ತಿಯ ಐಪಿಎಲ್ 12ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿತ್ತು. ಹಾಗಾಗಿ, ಅಂಜಿಂಕ್ಯಾ ರಹಾನೆಗೆ 12 ಲಕ್ಷ ರೂ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದ್ದ ರಾಜಸ್ಥಾನ್ ರಾಯಲ್ಸ್, 8 ಗಂಟೆಗೆ ಮೊದಲ ಇನಿಂಗ್ಸ್ ಆರಂಭಿಸಿ 9:58 ಕ್ಕೆ ಮುಗಿಸಬೇಕಿತ್ತು. ಆದರೆ, ಮುಗಿಸಿರಲಿಲ್ಲ. ಈ ಪಂದ್ಯದಲ್ಲಿ ಅಂತಿಮವಾಗಿ ಚೆನ್ನೈ 8 ರನ್‌ನಿಂದ ಜಯ ಸಾಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Ajinkya RahaneRajasthan Royalsರಾಜಸ್ತಾನ ರಾಯಲ್ಸ್ಅಜಿಂಕ್ಯ ರಹಾನೆCricket Offbeatಕ್ರಿಕೆಟ್ ಸ್ವಾರಸ್ಯIPL 2019ಐಪಿಎಲ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


