ಆರ್ಸಿಬಿಗೆ ಸತತ 4ನೇ ಸೋಲು, ಗೆಲುವಿನ ಖಾತೆ ತೆರೆದ ರಾಜಸ್ಥಾನ್ ರಾಯಲ್ಸ್
ಐಪಿಎಲ್ 12ನೇ ಆವೃತ್ತಿಯಲ್ಲಿ ಸೋಲಿನ ಸರಣಿ ಮುಂದುವರೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ನಾಲ್ಕನೆ ಬಾರಿ ಸೋಲು ಅನುಭವಿಸಿದ್ದು,...

Published On :
ಜೈಪುರ: ಐಪಿಎಲ್ 12ನೇ ಆವೃತ್ತಿಯಲ್ಲಿ ಸೋಲಿನ ಸರಣಿ ಮುಂದುವರೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ನಾಲ್ಕನೆ ಬಾರಿ ಸೋಲು ಅನುಭವಿಸಿದ್ದು, ರಾಜಸ್ಥಾನ್ ರಾಯಲ್ಸ್ ತಂಡ ಆರ್ ಸಿಬಿ ವಿರುದ್ಧ ಏಳು ವಿಕೆಟಗಳ ಭರ್ಜರಿ ಜಯ ಸಾಧಿಸುವ ಮೂಲಕ ಗೆಲುವಿನ ಖಾತೆ ತೆರೆದಿದೆ.
ಇಂದು ಎಸ್ಎಂಎಸ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್ ಸಿಬಿ, ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 158 ರನ್ ಕಲೆ ಹಾಕಿತ್ತು.
ಗೆಲುವಿಗೆ 159 ರನ್ ಗಳ ಸಾಧಾರಣ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್, ನಾಯಕ ಅಜಿಂಕ್ಯ ರಹಾನೆ ಹಾಗೂ ಜೋಸ್ ಬಟ್ಲರ್ ಅವರ ಉತ್ತಮ ಆಟದ ನೆರವಿನಿಂದ ಒಂದು ಎಸೆತ ಬಾಕಿ ಇರುವಂತೆಯೇ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿತು.
ಇನ್ನು ಬ್ಯಾಟಿಂಗ್-ಬೌಲಿಂಗ್ ಎರಡರಲ್ಲೂ ಕಳಪೆ ಪ್ರದರ್ಶನ ತೋರಿದ ಆರ್ಸಿಬಿ ಟೂರ್ನಿಯಲ್ಲಿ ಸತತ 4ನೇ ಸೋಲುಕಂಡಿದೆ.
ನಾಯಕ ವಿರಾಟ್ ಕೊಹ್ಲಿ ಹಾಗೂ ಪಾರ್ಥಿವ್ ಪಟೇಲ್ರಿಂದ ಮೊದಲ ವಿಕೆಟ್ಗೆ 49 ರನ್ಗಳ ಜೊತೆಯಾಟ ಬಂತಾಯಿತಾದರು ಕೊಹ್ಲಿ(23) ಶ್ರೇಯಸ್ ಗೋಪಾಲ್ರ ಸ್ಪಿನ್ ಮೋಡಿಗೆ ಬೌಲ್ಡ್ ಆದರು. ಇದಾದ ಬೆನ್ನಲ್ಲೆ ಎಬಿ ಡಿವಿಲಿಯರ್ಸ್(13) ಹಾಗೂ ಶಿಮ್ರೋನ್ ಹೆಟ್ಮೇರ್(1) ಬಂದ ಬೆನ್ನಲ್ಲೆ ಪೆವಿಲಿಯನ್ ಹಾದಿ ಹಿಡಿದಿದ್ದು ತಂಡಕ್ಕೆ ಮತ್ತಷ್ಟು ಹೊಡೆತ ಬಿದ್ದಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Royal Challengers BangaloreRajasthan Royalsರಾಯಲ್ ಚಾಲೆಂಜರ್ಸ್ ಬೆಂಗಳೂರುರಾಜಸ್ಥಾನ್ ರಾಯಲ್ಸ್IPL 2019ಐಪಿಎಲ್ 2019
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


