ಐಪಿಎಲ್ 2019: ಡೆಲ್ಲಿ ವಿರುದ್ಧ ಹೈದರಾಬಾದ್ ಗೆ 5 ವಿಕೆಟ್ ಗಳ ಭರ್ಜರಿ ಗೆಲುವು
ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ಗುರುವಾರ ಐದು ವಿಕೆಟ್ ಗಳ ಭರ್ಜರಿ ಗೆಲುವು...

Published On :
ನವದೆಹಲಿ: ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ಗುರುವಾರ ಐದು ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಂದು ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಐಪಿಎಲ್ ನ 16ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 129 ರನ್‌ಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕಟ್ಟಿಹಾಕಲು ಯಶಸ್ವಿಯಾಯಿತು. ನಂತರ ಬ್ಯಾಟಿಂಗ್ ಮಾಡಿದ ಹೈದರಾಬಾದ್ ಐದು ವಿಕೆಟ್‌ಗಳ ಗೆಲುವು ಸಾಧಿಸಿದೆ.
ಟಾಸ್ ಸೋತರು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಡೆಲ್ಲಿ ಕ್ಯಾಪಿಟಲ್ಸ್, ಮೊದಲ 10 ಓವರ್ನಲ್ಲೇ ಅಗ್ರ ಕ್ರಮಾಂಕದ ಪೃಥ್ವಿ ಶಾ (11), ಶಿಖರ್ ಧವನ್ (12) ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್(5) ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು.
ಕೊನೆಯ ಓವರ್ನಲ್ಲಿ ಕ್ರಿಸ್ ಮೊರಿಸ್ (17) ಹಾಗೂ ಅಕ್ಷ ರ್ ಪಟೇಲ್ (23) ಭರ್ಜರಿ ಬ್ಯಾಟಿಂಗ್ನ ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್ 129 ರನ್ಗಳ ಸಾಧಾರಣ ಸವಾಲು ನೀಡಿತು.
ಸುಲಭ ಸವಾಲನ್ನು ಬೆನ್ನಟ್ಟಿದ ಹೈದರಾಬಾದ್ ಜಾನಿ ಬೈರ್‌ಸ್ಟೋವ್(48) ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 9 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್‌ಗಳ ಸುಲಭ ಜಯ ದಾಖಲಿಸಿದೆ.
ಇನ್ನು ಸನ್‌ರೈಸರ್ಸ್ ಹೈದರಾಬಾದ್ ಪರ ವೇಗಿ ಭುವನೇಶ್ವರ್ ಕುಮಾರ್, ಸಿದ್ಧಾರ್ಥ್ ಕೌಲ್ ಮತ್ತು ಆಲ್‌ರೌಂಡರ್ ಮೊಹಮ್ಮದ್ ನಬಿ ತಲಾ ಎರಡು ವಿಕೆಟ್ ಪಡೆದು ಮಿಂಚಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


