ಐಪಿಎಲ್ 2019: ರಾಜಸ್ಥಾನ ರಾಯಲ್ಸ್ ವಿರುದ್ಧ ಕೋಲ್ಕತಾಗೆ 8 ವಿಕೆಟ್ ಗಳ ಭರ್ಜರಿ ಜಯ
ಜೈಪುರದಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

Published On :
ಜೈಪುರ: ಜೈಪುರದಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿತು. ಕೋಲ್ಕತಾ ಬೌಲರ್ ಗಳ ಸಾಂಘಿಕ ಮತ್ತು ಶಿಸ್ತು ಬದ್ಧ ದಾಳಿಯಿಂದಾಗಿ ರಾಜಸ್ಥಾನ ತಂಡದ ದಾಂಡಿಗರು ಹೆಚ್ಚು ರನ್ ಗಳಿಸುವಲ್ಲಿ ವಿಫಲರಾದರು. ಸ್ಟೀವ್ ಸ್ಮಿತ್ ಅಜೇಯ 73 ರನ್ ಗಳಿಸಿದರೆ, ಜಾಸ್ ಬಟ್ಲರ್ 37 ರನ್ ಗಳಿಸಿದರು. ಆ ಮೂಲಕ ಕೋಲ್ಕತಾಗೆ 140ರನ್ ಗಳ ಸಾಮಾನ್ಯ ಗುರಿ ನೀಡಿತು.
ಈ ಮೊತ್ತವನ್ನು ಬೆನ್ನು ಹತ್ತಿದ ಕೋಲ್ಕತಾ ತಂಡ ಕ್ರಿಸ್ ಲಿನ್ ಅವರ ಆಕರ್ಷಕ ಅರ್ಧಶತಕ ಹಾಗೂ ಸುನಿಲ್ ನರೇನ್ (47 ರನ್)ರ ಅಮೋಘ ಬ್ಯಾಟಿಂಗ್ ನೆರವಿನಿಂದಾಗಿ ಕೋಲ್ಕತಾ ತಂಡ ಕೇವಲ 13.5 ಓವರ್ ನಲ್ಲಿ 2 ವಿಕೆಟ್ ಕಳೆದುಕೊಂಡು 140 ರನ್ ಗಳಿಸಿ 8ವಿಕೆಟ್ ಭರ್ಜರಿ ಜಯ ಸಾಧಿಸಿತು.
ಇನ್ನು ಕೋಲ್ಕತಾ ಪರ 2 ವಿಕೆಟ್ ಪಡೆದು ರಾಜಸ್ಥಾನ ತಂಡವನ್ನು ಕಟ್ಟಿ ಹಾಕಿದ್ದ ಹ್ಯಾರಿ ಗರ್ನಿ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್JaipurಜೈಪುರKolkata Knight RidersRajasthan Royalsಕೋಲ್ಕತಾ ನೈಟ್ ರೈಡರ್ಸ್ರಾಜಸ್ಥಾನ ರಾಯಲ್ಸ್IPL 2019ಐಪಿಎಲ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


