ಕ್ರಿಕೆಟ್

ವಿರಾಟ್‌ ಕೊಹ್ಲಿಗೆ ವಿಶ್ರಾಂತಿ ನೀಡುವಂತೆ ಮೈಕಲ್‌ ವಾನ್‌ ಸಲಹೆ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಮುನ್ನಡೆಸುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅವರಿಗೆ ಮುಂಬರುವ ಐಸಿಸಿ ವಿಶ್ವಕಪ್‌ ಹಿನ್ನೆಲೆಯಲ್ಲಿ ಐಪಿಎಲ್‌ ಇನ್ನುಳಿದ ಪಂದ್ಯಗಳಿಂದ ವಿಶ್ರಾಂತಿ

ವಿರಾಟ್‌ ಕೊಹ್ಲಿಗೆ ವಿಶ್ರಾಂತಿ ನೀಡುವಂತೆ ಮೈಕಲ್‌ ವಾನ್‌ ಸಲಹೆ
ಮೈಕಲ್‌ ವಾನ್‌-ವಿರಾಟ್‌ ಕೊಹ್ಲಿ
Published On :
ನವದೆಹಲಿ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಮುನ್ನಡೆಸುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅವರಿಗೆ ಮುಂಬರುವ ಐಸಿಸಿ ವಿಶ್ವಕಪ್‌ ಹಿನ್ನೆಲೆಯಲ್ಲಿ ಐಪಿಎಲ್‌ ಇನ್ನುಳಿದ ಪಂದ್ಯಗಳಿಂದ ವಿಶ್ರಾಂತಿ ನೀಡಬೇಕು ಎಂದು ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೈಕಲ್‌ ವಾನ್‌ ಸಲಹೆ ನೀಡಿದ್ದಾರೆ.
12ನೇ ಆವೃತ್ತಿಯ ಶ್ರೀಮಂತ ಲೀಗ್‌ನಲ್ಲಿ ಆರ್‌ಸಿಬಿ ತಂಡ ಕಳಪೆ ಪ್ರದರ್ಶನ ನೀಡುತ್ತಿದ್ದು, ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದಲ್ಲೂ 4 ವಿಕೆಟ್‌ಗಳಿಂದ ಸೋಲು ಅನುಭವಿಸಿ ಮುಖಭಂಗ ಅನುಭವಿಸಿತು.  ಈ ಹಿನ್ನೆಲೆಯಲ್ಲಿ ಮೈಕಲ್‌ ವಾನ್‌, ಕೊಹ್ಲಿಗೆ ವಿಶ್ರಾಂತಿ ನೀಡಬೇಕು ಎಂದು ಸಲಹೆ ನೀಡಿದರು.
"ಮಹತ್ವದ ಐಸಿಸಿ ವಿಶ್ವಕಪ್‌ಗೆ ದಿನಗಣನೆ ಶುರುವಾಗಿದ್ದು, ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿಗೆ ಇನ್ನುಳಿದ ಪಂದ್ಯಗಳಿಗೆ ಆಡಿಸದೆ ವಿಶ್ರಾಂತಿ ನೀಡಬೇಕು ಎಂದು ಟ್ವೀಟ್‌ ಮಾಡಿದ್ದಾರೆ.
ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸತತ ಆರು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇನ್ನು, ಪ್ಲೇ ಅಪ್‌ಗೆ ಆರ್‌ಸಿಬಿ ಪ್ರವೇಶಿಸಿಬೇಕಾದರೆ ಇನ್ನುಳಿದ 8 ಪಂದ್ಯಗಳಲ್ಲಿ ಜಯ ಸಾಧಿಸಬೇಕು.
2018-19ನೇ ಸಾಲಿನಲ್ಲಿ ವಿರಾಟ್‌ ಕೊಹ್ಲಿ ನಾಯಕತ್ವದಲ್ಲಿ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ವಿರುದ್ಧ ಐತಿಹಾಸಿಕ ಸರಣಿಗಳಲ್ಲಿ ಜಯ ಸಾಧಿಸಿದೆ. ಆದರೆ, ಐಸಿಸಿ ವಿಶ್ವಕಪ್‌ ಸಮೀಪಿಸುತ್ತಿದ್ದು, ಕೊಹ್ಲಿ ಸೇರಿದಂತೆ ಟೀಂ ಇಂಡಿಯಾ ಆಟಗಾರರಿಗೆ ವಿಶ್ರಾಂತಿ ಅಗತ್ಯವಿದೆ.
ಇಂಗ್ಲೆಂಡ್‌ನಲ್ಲಿ ಮೇ 31 ರಿಂದ ಆರಂಭವಾಗುವ ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ಜೂ. 5 ರಂದು ವೇಲ್ಸ್‌ನಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.