ವಿಶ್ವಕಪ್‌ಗೆ ತಂಡ ಪ್ರಕಟಣೆಗೂ ಮುನ್ನವೇ ಟೀಂ ಇಂಡಿಯಾಗೆ ಆಘಾತ, ರೋ'ಹಿಟ್' ಶರ್ಮಾಗೆ ಗಾಯ!
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಐಪಿಎಲ್ ಪಂದ್ಯಾವಳಿಯ ವೇಳೆ ಗಾಯಗೊಂಡಿರುವುದು ಇದೀಗ ಬಿಸಿಸಿಐಗೆ ತಲೆನೋವಾಗಿ ಪರಿಣಮಿಸಿದೆ.

Published On :
ಮುಂಬೈ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಐಪಿಎಲ್ ಪಂದ್ಯಾವಳಿಯ ವೇಳೆ ಗಾಯಗೊಂಡಿರುವುದು ಇದೀಗ ಬಿಸಿಸಿಐಗೆ ತಲೆನೋವಾಗಿ ಪರಿಣಮಿಸಿದೆ.
ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಕೈಗೆ ಗಾಯವಾಗಿತ್ತು. ತೀವ್ರ ನೋವಿನಿಂದ ನರಳುತ್ತಿದ್ದ ಅವರಿಗೆ ಫಿಸಿಯೋ ನಿತಿನ್ ಪಟೇಲ್ ಸಹಾಯದಿಂದ ಪೆವಿಲಿಯನ್ ಗೆ ಮರಳಿದರು. ರೋಹಿತ್ ಗಾಯದ ಗಂಭೀರತೆ ಇನ್ನು ತಿಳಿದುಬಂದಿಲ್ಲ.
ಮೇನಲ್ಲಿ ಇಂಗ್ಲೆಂಡ್ ನಲ್ಲಿ ವಿಶ್ವಕಪ್ ಪಂದ್ಯಾವಳಿ ಆರಂಭವಾಗಲಿದ್ದು ಪಂದ್ಯಾವಳಿಗೂ ಮುನ್ನ ರೋಹಿತ್ ಶರ್ಮಾ ಚೇತರಿಸಿಕೊಳ್ಳದಿದ್ದರೆ ಟೀಂ ಇಂಡಿಯಾಗೆ ದೊಡ್ಡ ಆಘಾತವಾಗಲಿದೆ.
ಇನ್ನು ಬಿಸಿಸಿಐ ಏಪ್ರಿಲ್ 15ರಂದು ಟೀಂ ಇಂಡಿಯಾ ತಂಡವನ್ನು ಪ್ರಕಟಿಸುವುದಾಗಿ ಘೋಷಿಸಿತ್ತು. ಆದರೆ ಇದಕ್ಕೂ ಮೊದಲೆ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaRohit Sharmaರೋಹಿತ್ ಶರ್ಮಾWorld Cup 2019IPL 2019ಐಪಿಎಲ್ 2019ವಿಶ್ವಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


