ಚೆನ್ನೈ ತಂಡಕ್ಕೆ ಮತ್ತೊಂದು ಕೊನೆಯ ಓವರ್ ರೋಚಕ ಗೆಲುವು!
ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಪಂದ್ಯದಲ್ಲಿ ಸೋಲುತ್ತದೆ ಅನ್ನುವಷ್ಟರಲ್ಲಿ ಕೊನೆ ಕೊನೆಗೆ ಭರ್ಜರಿ ಬ್ಯಾಟಿಂಗ್ ಮಾಡಿ ಕೊನೆಯ ಓವರ್ ನಲ್ಲಿ ರೋಚಕ ಗೆಲುವು ಸಾಧಿಸಿ ಪುಟಿದೇಳುತ್ತದೆ. ಅದೇ ರೀತಿ ಮತ್ತೊಂದು...

Published On :
ಕೋಲ್ಕತ್ತಾ: ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಪಂದ್ಯದಲ್ಲಿ ಸೋಲುತ್ತದೆ ಅನ್ನುವಷ್ಟರಲ್ಲಿ ಕೊನೆ ಕೊನೆಗೆ ಭರ್ಜರಿ ಬ್ಯಾಟಿಂಗ್ ಮಾಡಿ ಕೊನೆಯ ಓವರ್ ನಲ್ಲಿ ರೋಚಕ ಗೆಲುವು ಸಾಧಿಸಿ ಪುಟಿದೇಳುತ್ತದೆ. ಅದೇ ರೀತಿ ಮತ್ತೊಂದು ಭರ್ಜರಿ ಗೆಲುವನ್ನು ಚೆನ್ನೈ ಸಾಧಿಸಿದೆ.
ಕೊಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕೊಲ್ಕತ್ತಾ ನೈಟ್ಸ್ ರೈಡರ್ಸ್ ತಂಡ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 161 ರನ್ ಪೇರಿಸಿತ್ತು. 162 ರನ್ ಗಳ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇನ್ನು 2 ಎಸೆತ ಇರುವಂತೆ 162 ರನ್ ಪೇರಿಸಿ ಗೆಲುವಿನ ನಗೆ ಬೀರಿತು.
ಕೋಲ್ಕತ್ತಾ ಪರ ಬ್ಯಾಟಿಂಗ್ ನಲ್ಲಿ ಲ್ಯಾನ್ 82, ರಾಣಾ 21, ದಿನೇಶ್ ಕಾರ್ತಿಕ್ 18 ಮತ್ತು ಶುಭ್ನಮ್ ಗಿಲ್ 15 ರನ್ ಬಾರಿಸಿದ್ದಾರೆ. ಚೆನ್ನೈ ಪರ ಬೌಲಿಂಗ್ ನಲ್ಲಿ ಇಮ್ರಾನ್ ತಾಹಿರ್ 4 ವಿಕೆಟ್, ಠಾಕೂರ್ 2 ಮತ್ತು ಸ್ಯಾನ್ಟರ್ 1 ವಿಕೆಟ್ ಪಡೆದಿದ್ದಾರೆ.
ಚೆನ್ನೈ ಪರ ಡುಪ್ಲೇಸಿಸ್ 24, ಕೇದಾರ್ ಜಾದವ್ 20, ಸುರೇಶ್ ರೈನಾ ಅಜೇಯ 58 ಮತ್ತು ರವೀಂದ್ರ ಜಡೇಜಾ ಅಜೇಯ 31 ರನ್ ಪೇರಿಸಿದ್ದಾರೆ.
ಕೋಲ್ಕತ್ತಾ ಪರ ಬೌಲಿಂಗ್ ನಲ್ಲಿ ನರೈನ್ 2, ಪಿಯೂಶ್ ಚಹಾಲ್ ತಲಾ 2 ಮತ್ತು ಗುನ್ರಿ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


