ಕ್ರಿಕೆಟ್ ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ: ರಾಹುಲ್, ಕಾರ್ತಿಕ್ ಇನ್; ಪಂತ್, ರಾಯುಡು ಔಟ್
ಮುಂಬರುವ ಐಸಿಸಿ ವಿಶ್ವಕಪ್‌ಗೆ 15 ಆಟಗಾರರ ಭಾರತ ತಂಡವನ್ನು ಬಿಸಿಸಿಐ ಇಂದು ಬಿಡುಗಡೆ ಮಾಡಿದೆ.

ಮುಂಬರುವ ಐಸಿಸಿ ವಿಶ್ವಕಪ್‌ಗೆ 15 ಆಟಗಾರರ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಇಂದು ಬಿಡುಗಡೆ ಮಾಡಿದೆ. ಎಂದಿನಂತೆ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದು, ರೋಹಿತ್ ಶರ್ಮಾ ಉಪ ನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ, ನಿರೀಕ್ಷೆಯಂತೆ ಕರ್ನಾಟಕದ ಕೆ ಎಲ್ ರಾಹುಲ್ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್. ಕೆ ಪ್ರಸಾದ್ ನೇತೃತ್ವದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮುಖ್ಯ ತರಬೇತುದಾರ ರವಿಶಾಸ್ತ್ರಿ ಅವರನ್ನೊಳಗೊಂಡ ಸಭೆಯಲ್ಲಿ 15 ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ.
ರಿಷಭ್ ಪಂತ್ ಹಾಗೂ ಅಂಬಾಟಿ ರಾಯುಡು ಅವರ ಬದಲಿಗೆ ಕೆ.ಎಲ್. ರಾಹುಲ್ ಹಾಗೂ ದಿನೇಶ್ ಕಾರ್ತಿಕ್ ಅವರಿಗೆ ಸ್ಥಾನ ಕಲ್ಪಿಸಲಾಗಿದೆ. ಜತೆಗೆ ಆಲ್‌ರೌಂಡರ್ ವಿಜಯ್ ಶಂಕರ್ ಹಾಗೂ ರವೀಂದ್ರ ಜಡೇಜಾಗೆ ಅವಕಾಶ ನೀಡಲಾಗಿದೆ.
ಅಂಬಾಟಿ ರಾಯುಡು ಹಾಗೂ ರಿಷಭ್ ಪಂತ್ ಅವರು ವಿಶ್ವಕಪ್ ಭಾರತ ತಂಡದ ಪ್ರಮುಖ ಸಂಭವನೀಯ ಆಟಗಾರರಾಗಿದ್ದರು. ಆದರೆ, ಯುವ ವಿಕೆಟ್ ಕೀಪರ್ ಪಂತ್ ಬದಲು ಅನುಭವಿ ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ನೀಡಲಾಗಿದೆ. ಮೀಸಲು ಆರಂಭಿಕ ಹಾಗೂ ನಾಲ್ಕನೇ ಕ್ರಮಾಂಕಕ್ಕೆ ಅಂಬಾಟಿ ರಾಯುಡು ಬದಲು ಕನ್ನಡಿಗ ರಾಹುಲ್ ಅವರನ್ನು ಪರಿಗಣಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


