ಕ್ರಿಕೆಟ್

ವಿಶ್ವಕಪ್ ವಿಜೇತ ತಂಡ ಆಟಗಾರ ಯುವರಾಜ್ ಸಿಂಗ್‌ಗೆ ಮಾಡಿದ ಅವಮಾನವಿದು: ಗಂಭೀರ್

2011ರ ವಿಶ್ವಕಪ್ ವಿಜೇತ ತಂಡದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ಯುವರಾಜ್ ಸಿಂಗ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.

ವಿಶ್ವಕಪ್ ವಿಜೇತ ತಂಡ ಆಟಗಾರ ಯುವರಾಜ್ ಸಿಂಗ್‌ಗೆ ಮಾಡಿದ ಅವಮಾನವಿದು: ಗಂಭೀರ್
ಸಂಗ್ರಹ ಚಿತ್ರ
Published On :
ಮುಂಬೈ: 2011ರ ವಿಶ್ವಕಪ್ ವಿಜೇತ ತಂಡದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ಯುವರಾಜ್ ಸಿಂಗ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.
ಟೀಂ ಇಂಡಿಯಾದ ಆಲ್ರೌಂಡ್ ಯುವರಾಜ್ ಸಿಂಗ್ ಅವರನ್ನು ಐಪಿಎಲ್ ನಲ್ಲಿ ಕಡಿಮೆ ಬೆಲೆಗೆ ಖರೀದಿ ಮಾಡಿದ್ದು ಈ ಮೂಲಕ ಫ್ರಾಂಚೈಸಿಗಳು ಅವರಿಗೆ ಅವಮಾನ ಮಾಡಲಾಗಿದೆ ಎಂದರು.
ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ ಗಂಭೀರ್ ಅವರು ಹರಾಜು ಪ್ರಕ್ರಿಯೆ ವೇಳೆ ಯುವಿ ಅವರಿಗೆ ಮತ್ತಷ್ಟು ಬೆಲೆ ನೀಡಬಹುದಿತ್ತು. ಆ ಹಣಕ್ಕೆ ಅವರು ಅರ್ಹರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಹಲವು ದಿನಗಳಿಂದ ಬ್ಯಾಟಿಂಗ್ ಫಾರ್ಮ್ ಹಾಗೂ ಫಿಟ್ನೆಸ್ ಕಾಯ್ದುಕೊಳ್ಳಲು ಶ್ರಮವಹಿಸುತ್ತಿದ್ದ ಯುವರಾಜ್ ಸಿಂಗ್ ಈ ಬಾರಿಯ ಟೂರ್ನಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಸಿಕ್ಕ ಅವಕಾಶಗಳನ್ನು ಬಳಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.