ಐಪಿಎಲ್ 2019: ಕೋಲ್ಕತ್ತಾ ವಿರುದ್ಧ ಗೆದ್ದ ರಾಜಸ್ಥಾನ್, ಆರ್‌ಸಿಬಿ ಫ್ಲೇ ಆಫ್ ಕನಸಿಗೆ ತೊಡಕು?
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಗೆದ್ದುಕೊಂಡಿದ್ದು ಈ ಮೂಲಕ ಆರ್‌ಸಿಬಿ ಫ್ಲೇ ಆಫ್ ಕನಸಿಗೆ ತೊಡಕುಂಟು ಮಾಡಲಿದೆ.

Published On :
ಕೋಲ್ಕತ್ತಾ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಗೆದ್ದುಕೊಂಡಿದ್ದು ಈ ಮೂಲಕ ಆರ್‌ಸಿಬಿ ಫ್ಲೇ ಆಫ್ ಕನಸಿಗೆ ತೊಡಕುಂಟು ಮಾಡಲಿದೆ.
ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ತಂಡ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 175 ರನ್ ಪೇರಿಸಿತ್ತು. 176 ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ ತಂಡ ಇನ್ನು 4 ಎಸೆತ ಬಾಕಿ ಇರುವಂತೆ 7 ವಿಕೆಟ್ ನಷ್ಟಕ್ಕೆ 177 ರನ್ ಪೇರಿಸುವ ಮೂಲಕ ಗೆಲುವಿನ ನಗೆ ಬೀರಿತು.
ಕೋಲ್ಕತ್ತಾ ಪರ ನಾಯಕ ದಿನೇಶ್ ಕಾರ್ತಿಕ್ ಅಜೇಯ 97, ರಾಣಾ 21, ಆ್ಯಂಡ್ರೂ ರಸೂಲ್ 14 ರನ್ ಪೇರಿಸಿದ್ದಾರೆ.
ರಾಜಸ್ಥಾನ ಪರ ರಹಾನೆ 34, ಸ್ಯಾಮ್ಸನ್ 22, ಪರಾಗ್ 47 ಮತ್ತು ಆರ್ಚೆರ್ 27 ರನ್ ಪೇರಿಸಿದ್ದಾರೆ.
ಈ ಮೂಲಕ 11 ಪಂದ್ಯಗಳಲ್ಲಿ 4 ಪಂದ್ಯವನ್ನು ಗೆದ್ದು 8 ಅಂಕಗಳೊಂದಿಗೆ ರಾಜಸ್ಥಾನ 7ನೇ ಸ್ಥಾನದಲ್ಲಿದೆ. ಅದೇ ರೀತಿ ಆರ್ಸಿಬಿ ಸಹ 11 ಪಂದ್ಯಗಳಲ್ಲಿ 4 ಪಂದ್ಯ ಗೆದ್ದು 8 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದೆ. ಒಟ್ಟಿನಲ್ಲಿ ಆರ್‌ಸಿಬಿ ಫ್ಲೇ ಆಫ್ ಹಂತಕ್ಕೆ ಹೋಗಬೇಕಾದರೂ ಇಳಿದಿರುವ ಮೂರು ಪಂದ್ಯಗಳನ್ನು ಗೆಲ್ಲಬೇಕಾಗಿರುವುದು ಅನಿವಾರ್ಯ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Kolkata Knight RidersRajasthan RoyalsRCBರಾಜಸ್ಥಾನ್ ರಾಯಲ್ಸ್ಕೋಲ್ಕತ್ತಾ ನೈಟ್ ರೈಡರ್ಸ್ಆರ್ಸಿಬಿIPL 2019ಐಪಿಎಲ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


