ಆರ್ಸಿಬಿ ಪ್ಲೇ ಆಫ್ ಕನಸಿಗೆ ಕೊಳ್ಳಿ ಇಟ್ಟ ಆ ಒಂದು ಕ್ಯಾಚ್, ವಿಡಿಯೋ ವೈರಲ್!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಕೆಲ ಪಂದ್ಯಗಳನ್ನು ಗೆಲ್ಲುವ ಮೂಲಕ ಕೊನೆಯ ಹಂತದಲ್ಲಿ ಅಭಿಮಾನಿಗಳಲ್ಲಿ ಆರ್‌ಸಿಬಿ ಪ್ಲೇ ಆಫ್ ಕನಸು ಚಿಗುರಿತ್ತು.

Published On :
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಕೆಲ ಪಂದ್ಯಗಳನ್ನು ಗೆಲ್ಲುವ ಮೂಲಕ ಕೊನೆಯ ಹಂತದಲ್ಲಿ ಅಭಿಮಾನಿಗಳಲ್ಲಿ ಆರ್‌ಸಿಬಿ ಪ್ಲೇ ಆಫ್ ಕನಸು ಚಿಗುರಿತ್ತು. ಆದರೆ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಅಕ್ಷರ್ ಪಟೇಲ್ ಹಿಡಿದ ಆ ಒಂದು ಕ್ಯಾಚ್ ಆರ್‌ಸಿಬಿ ಪ್ಲೇ ಆಫ್ ಕನಸನ್ನೇ ಭಗ್ನಗೊಳಿಸಿತು.
ದೆಹಲಿಯ ಫಿರೋಜ್ ಶಾ ಕೋಟ್ಲಾ ನಡೆದ ಪಂದ್ಯದಲ್ಲಿ ಆರ್‌ಸಿಬಿ 16 ರನ್ ಗಳಿಂದ ಸೋಲು ಕಂಡಿತ್ತು. ಆ ಮೂಲಕ ಆರ್‌ಸಿಬಿ ಪ್ಲೇ ಆಫ್ ಕನಸು ಭಗ್ನಗೊಂಡಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಔಟಾಗಿದ್ದ ಬಳಿಕ ಜಾಣ್ಮೆಯ ಆಟವಾಡುತ್ತಿದ್ದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಸಿಡಿಸಿದ ಚೆಂಡನ್ನು ಅಕ್ಷರ್ ಪಟೇಲ್ ಬೌಂಡರಿ ಗೆರೆಯಲ್ಲಿ ಅದ್ಭುತ ಕ್ಯಾಚ್ ಹಿಡಿದಿದ್ದರು. ಇದು ಆರ್‌ಸಿಬಿಯ ಜಂಗಾಬಲವನ್ನೇ ಕುಗ್ಗಿಸಿತ್ತು. ಅಂತೆ ನಂತರ ಬಂದ ಬ್ಯಾಟ್ಸ್ ಮನ್ ಗಳು ಸಹ ಉತ್ತಮ ಆಟವಾಡದ ಕಾರಣ ತಂಡ 16 ರನ್ ಗಳಿಂದ ಸೋಲು ಕಂಡಿತ್ತು.
ಐಪಿಎಲ್ ಟೂರ್ನಿಯಲ್ಲಿ 12 ಪಂದ್ಯಗಳನ್ನು ಆಡಿರುವ ಆರ್ಸಿಬಿ 4 ಪಂದ್ಯಗಳನ್ನು ಗೆದ್ದು 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
WATCH: Axar’s ‘Axe'cellence at the boundary
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
AB de VilliersRCBಆರ್ಸಿಬಿಎಬಿ ಡಿವಿಲಿಯರ್ಸ್Axar Patelಅಕ್ಷರ್ ಪಟೇಲ್Cricket Offbeatಕ್ರಿಕೆಟ್ ಸ್ವಾರಸ್ಯIPL 2019ಐಪಿಎಲ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


