ಕ್ರಿಕೆಟ್

ವಿಶ್ವಕಪ್ ಸೆಮಿಫೈನಲ್‌ನಲ್ಲಿ ಎಂಎಸ್ ಧೋನಿ ನಂ.7ರಲ್ಲಿ ಆಡಿದ್ದೇಕೆ? ಬಂಗಾರ್ ಬಿಚ್ಚಿಟ್ಟ ಸತ್ಯವೇನು?

ಕಳೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದ್ದು ಪಂದ್ಯ ಸೋಲಿಗೆ ಎಂಎಸ್ ಧೋನಿ ನಂಬರ್...

ವಿಶ್ವಕಪ್ ಸೆಮಿಫೈನಲ್‌ನಲ್ಲಿ ಎಂಎಸ್ ಧೋನಿ ನಂ.7ರಲ್ಲಿ ಆಡಿದ್ದೇಕೆ? ಬಂಗಾರ್ ಬಿಚ್ಚಿಟ್ಟ ಸತ್ಯವೇನು?
ಸಂಜಯ್ ಬಂಗಾರ್-ಎಂಎಸ್ ಧೋನಿ
Published On :
ನವದೆಹಲಿ: ಕಳೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದ್ದು ಪಂದ್ಯ ಸೋಲಿಗೆ ಎಂಎಸ್ ಧೋನಿ ನಂಬರ್ 7ರಲ್ಲಿ ಆಡಿದ್ದೆ ಕಾರಣ ಎಂಬ ಮಾತುಗಳು ಕೇಳಿಬಂದಿದ್ದು ಇದಕ್ಕೆ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಅಂದು ಏನು ನಡೆಯಿತು ಎಂದು ಹೇಳಿದ್ದಾರೆ.
2014ರಿಂದ ಸಂಜಯ್ ಬಂಗಾರ್ ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಆಗಿದ್ದಾರೆ. 2019ರ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಬ್ಯಾಟಿಂಗ್ ಕ್ರಮಾಂಕ ಬದಲಾವಣೆ ಮಾಡಿದ್ದೆ ತಂಡ ಸೋಲಿಗೆ ಕಾರಣ. ಧೋನಿ ನಂಬರ್ 7ನೇ ಕ್ರಮಾಂಕದಲ್ಲಿ ಆಡಲು ಸಂಜಯ್ ಬಂಗಾರ್ ಕಾರಣ ಎಂಬ ಮಾತುಗಳು ಕೇಳಿಬಂದಿತ್ತು. 
ಈ ಬಗ್ಗೆ ಮಾತನಾಡಿದ ಸಂಜಯ್ ಬಂಗಾರ್ ಅವರು ಈ ವಿಚಾರದಲ್ಲಿ ನನ್ನ ವಿರುದ್ಧ ಬೊಟ್ಟು ಮಾಡಿ ತೋರಿಸುತ್ತಿರುವವರನ್ನು ನಿಜಕ್ಕೂ ಮೆಚ್ಚಿಕೊಳ್ಳಬೇಕು. ಯಾಕೆಂದರೆ ಬ್ಯಾಟಿಂಗ್ ಕ್ರಮಾಂಕದ ವಿಚಾರದಲ್ಲಿ ನಾನು ಒಬ್ಬನೇ ನಿರ್ಧಾರ ಕೈಗೊಳ್ಳುವಂತಿಲ್ಲ ಎಂಬ ವಿಚಾರ ಅವರಿಗೆ ಗೊತ್ತಿಲ್ಲವಲ್ಲ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.