ಕ್ರಿಕೆಟ್

ಪಾಕ್ ಮಾಜಿ ಕ್ರಿಕೆಟಿಗ ಅಖ್ತರ್ ಮ್ಯಾಚ್ ಫಿಕ್ಸಿಂಗ್‌ಗಾಗಿ ನನ್ನನ್ನು ಸಂಪರ್ಕಿಸಿದ್ದ: ಅಕ್ಮಲ್ ಹೊಸ ಬಾಂಬ್

ಪಾಕ್ ಮಾಜಿ ಕ್ರಿಕೆಟಿಗರೊಬ್ಬರು ನನ್ನನ್ನು ಸಂಪರ್ಕಿಸಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುವಂತೆ ಹೇಳಿದ್ದರು ಎಂದು ಪಾಕ್ ತಂಡದ ಮಾಜಿ ಆಟಗಾರ ಉಮರ್ ಅಕ್ಮಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ಪಾಕ್ ಮಾಜಿ ಕ್ರಿಕೆಟಿಗ ಅಖ್ತರ್ ಮ್ಯಾಚ್ ಫಿಕ್ಸಿಂಗ್‌ಗಾಗಿ ನನ್ನನ್ನು ಸಂಪರ್ಕಿಸಿದ್ದ: ಅಕ್ಮಲ್ ಹೊಸ ಬಾಂಬ್
ಉಮರ್ ಅಕ್ಮಲ್
Published On :
ಬ್ರಾಂಪ್ಟನ್: ಪಾಕ್ ಮಾಜಿ ಕ್ರಿಕೆಟಿಗರೊಬ್ಬರು ನನ್ನನ್ನು ಸಂಪರ್ಕಿಸಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುವಂತೆ ಹೇಳಿದ್ದರು ಎಂದು ಪಾಕ್ ತಂಡದ ಮಾಜಿ ಆಟಗಾರ ಉಮರ್ ಅಕ್ಮಲ್ ಹೊಸ ಬಾಂಬ್ ಸಿಡಿಸಿದ್ದಾರೆ. 
ಕೆನಡಾದಲ್ಲಿ ನಡೆಯುತ್ತಿರುವ ಗ್ಲೋಬಲ್ ಟಿ20 ಪಂದ್ಯಗಳಲ್ಲಿ ಉಮರ್ ಅಕ್ಮಲ್ ಆಡುತ್ತಿದ್ದು ವಿನ್ನಿಪೆಗ್ ಹವಾಕ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇದೇ ಟೂರ್ನಿಯಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುವಂತೆ ಮನ್ಸೂರ್ ಅಖ್ತರ್ ಸಂಪರ್ಕ ಮಾಡಿದ್ದರು ಎಂದು ಅಕ್ಮಲ್ ಹೇಳಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.
ಮನ್ಸೂರ್ ಅಖ್ತರ್ ನನ್ನನ್ನು ಸಂಪರ್ಕ ಮಾಡಿದ್ದರು ಎಂದು ಅಕ್ಮಲ್ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಮತ್ತು ಗ್ಲೋಬಲ್ ಟಿ20 ಟೂರ್ನಿಯ ಆಡಳಿತ ಮಂಡಳಿಯವರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಅಕ್ಮಲ್ ಆರೋಪಿಸಿರುವ ಮನ್ಸೂರ್ ಅಖ್ತರ್ 1980ರಿಂದ 1990ರವರೆಗೆ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದು 41 ಏಕದಿನ ಪಂದ್ಯ ಮತ್ತು 19 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.