ಕ್ರಿಕೆಟ್

2ನೇ ಏಕದಿನ ಪಂದ್ಯ: ಲಾರಾ ದಾಖಲೆ ಮುರಿದ ಕ್ರಿಸ್ ಗೇಯ್ಲ್

ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ವಿಂಡೀಸ್ ದೈತ್ಯ ಕ್ರಿಸ್ ಗೇಯ್ಲ್ ಲೆಜೆಂಡ್ ಆಟಗಾರ ಬ್ರಿಯಾನ್ ಲಾರಾ ಅವರ ದಾಖಲೆ ಮುರಿದಿದ್ದಾರೆ.

2ನೇ ಏಕದಿನ ಪಂದ್ಯ: ಲಾರಾ ದಾಖಲೆ ಮುರಿದ ಕ್ರಿಸ್ ಗೇಯ್ಲ್
Published On :

ಟ್ರಿನಿಡಾಡ್: ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ವಿಂಡೀಸ್ ದೈತ್ಯ ಕ್ರಿಸ್ ಗೇಯ್ಲ್ ಲೆಜೆಂಡ್ ಆಟಗಾರ ಬ್ರಿಯಾನ್ ಲಾರಾ ಅವರ ದಾಖಲೆ ಮುರಿದಿದ್ದಾರೆ.

ಇಂದು ಟ್ರಿನಿಡಾಡ್ ನ ಪೋರ್ಟ್ ಆಫ್ ಸ್ಪೇನ್ ನಲ್ಲಿರುವ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಗೇಯ್ಲ್, 11 ರನ್ ಗಳಿಸುವ ಮೂಲಕ ಲಾರಾ ದಾಖಲೆ ಮುರಿದಿದ್ದಾರೆ. ಪ್ರಸ್ತುತ ವೆಸ್ಟ್ ಇಂಡೀಸ್ ಪರ ಕ್ರಿಸ್ ಗೇಯ್ಲ್ 10353 ರನ್ ಗಳಿಸುವ ಮೂಲಕ ಅತೀ ಹೆಚ್ಚು ರನ್ ಗಳಿಸಿದ ವಿಂಡೀಸ್ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

ಅಂತೆಯೇ ವೆಸ್ಟ್ ಇಂಡೀಸ್ ಪರ ಅತೀ ಹೆಚ್ಚು(297) ಪಂದ್ಯವನ್ನಾಡಿದ ಆಟಗಾರನಾಗಿದ್ದು, ವಿಂಡೀಸ್ ಪರ ಅತೀ ಹೆಚ್ಚು(25) ಶತಕ ಸಿಡಿಸಿದ ಆಟಗಾರರಾಗಿದ್ದಾರೆ. ಅಂತೆಯೇ ಏಕದಿನ ಕ್ರಿಕೆಟ್ ನಲ್ಲಿ ವಿಂಡೀಸ್ ಪರ ಪಂದ್ಯವೊಂದರಲ್ಲಿ ಗರಿಷ್ಛ ರನ್ ಗಳಿಸಿದ (215) ಆಟಗಾರ ಕೂಡ ಆಗಿದ್ದಾರೆ. ಅಲ್ಲದೆ ವೆಸ್ಟ್ ಇಂಡೀಸ್ ಪರ ಅತೀ ಹೆಚ್ಚು ಸಿಕ್ಸರ್ (325) ಮತ್ತು ಅತೀ ಹೆಚ್ಚು ಔಟ್ ಫೀಲ್ಡ್ ಕ್ಯಾಚ್ (123)ಪಡೆದ ಆಟಗಾರ ಕೂಡ ಆಗಿದ್ದಾರೆ.
Legendary Status ✔
Congratulations @henrygayle

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.