'ಪಾಕಿಸ್ತಾನದಲ್ಲಿ ಬದುಕಲು ನಡುಕ ಹುಟ್ಟಿಸುತ್ತಿತ್ತು': ಮಾಜಿ ಪಾಕ್ ಕೋಚ್ ಫ್ಲವರ್ ಬಿಚ್ಚಿಟ್ಟ ಭಯಾನಕ ಸತ್ಯ!
ಪಾಕಿಸ್ತಾನ ದೇಶದಲ್ಲಿನ ಬದುಕು ಮತ್ತು ಪಾಕ್ ಕ್ರಿಕೆಟ್ ಮಂಡಳಿಯಲ್ಲಿನ ಸುಮಾರು ಐದು ವರ್ಷಗಳ ಕಾಲ ಕಳೆದ ಅನುಭವದ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಬ್ಯಾಟಿಂಗ್ ಕೋಚ್ ಗ್ರ್ಯಾಂಟ್ ಫ್ಲವರ್ ಬಾಯ್ಬಿಟ್ಟಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನ ದೇಶದಲ್ಲಿನ ಬದುಕು ಮತ್ತು ಪಾಕ್ ಕ್ರಿಕೆಟ್ ಮಂಡಳಿಯಲ್ಲಿನ ಸುಮಾರು ಐದು ವರ್ಷಗಳ ಕಾಲ ಕಳೆದ ಅನುಭವದ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಬ್ಯಾಟಿಂಗ್ ಕೋಚ್ ಗ್ರ್ಯಾಂಟ್ ಫ್ಲವರ್ ಬಾಯ್ಬಿಟ್ಟಿದ್ದಾರೆ.
ಪಿಸಿಬಿಯು ಫ್ಲವರ್ ಜೊತೆಗಿನ ಒಪ್ಪಂದ ಮುಂದುವರಿಸದಿರಲು ನಿರ್ಧರಿಸಿದ ಬಳಿಕ ಫ್ಲವರ್ ಪಾಕ್ ಬಗ್ಗೆ ಮೊದಲ ಬಾರಿ ತುಟಿ ಬಿಚ್ಚಿದ್ದು, ಸ್ನೇಹಿ ಜನರು ಪಾಕಿಸ್ತಾನ ದೇಶದಲ್ಲಿರುವುದು ಒಳ್ಳೆಯ ವಿಚಾರ. ಹಾಗೇ ಸ್ವಾತಂತ್ರ್ಯದ ಕೊರತೆ ಮತ್ತು ಭದ್ರತೆ ವಿಚಾರ ಪಾಕಿಸ್ತಾನದಲ್ಲಿ ಬದುಕುವ ನಿಟ್ಟಿನಲ್ಲಿ ಇರುವ ತುಂಬಾನೇ ನಿರಾಶಾದಾಯಕವಾದ ಸಂಗತಿ ಎಂದು ಹೇಳಿದರು.
2014ರಿಂದಲೂ ಪಾಕಿಸ್ತಾನ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ಫ್ಲವರ್ ಅವರೊಂದಿಗಿನ ಒಪ್ಪಂದವನ್ನು ನವೀಕರಿಸುವ ಜತೆಗೆ ಇಡೀ ಕೋಚಿಂಗ್ ವಿಭಾಗ ಮತ್ತು ಬೆಂಬಲ ಸಿಬ್ಬಂದಿ ವರ್ಗವನ್ನು ಬದಲಾಯಿಸಲು ಪಿಸಿಬಿ ಬಯಸಿದೆ. 2019ರ ವಿಶ್ವಕಪ್ನಲ್ಲಿ ಪಾಕ್ ತಂಡ ಸೆಮಿಫೈನಲ್ ಪ್ರವೇಶಿಸಲು ವಿಫಲವಾದ ಕಾರಣಕ್ಕೆ ಪಿಸಿಬಿ ಈ ನಿರ್ಧಾರ ತೆಗೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


