ಬುಮ್ರಾ, ರಹಾನೆ ಅದ್ಭುತ ಪ್ರದರ್ಶನ-ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ 318 ರನ್ ಗೆಲುವು!
ಭಾರತ-ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ನಲ್ಲಿ ಅಜಿಂಕ್ಯ ರಹಾನೆ ಹಾಗೂ ಜಸ್ಪ್ರೀತ್ ಬುಮ್ರಾಅದ್ಭುತ ಪ್ರದರ್ಶನದಿಂದ ಭಾರತ 318 ರನ್ ಗಳ ಅಭೂತಪೂರ್ವ ಜಯ ಸಾಧಿಸಿದೆ.

ಆಂಟಿಗುವಾ":ಭಾರತ-ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ನಲ್ಲಿ ಅಜಿಂಕ್ಯ ರಹಾನೆ ಹಾಗೂ ಜಸ್ಪ್ರೀತ್ ಬುಮ್ರಾಅದ್ಭುತ ಪ್ರದರ್ಶನದಿಂದ ಭಾರತ 318 ರನ್ ಗಳ ಅಭೂತಪೂರ್ವ ಜಯ ಸಾಧಿಸಿದೆ. ಅಜಿಂಕ್ಯ ರಹಾನೆ ಎರಡು ವರ್ಷಗಳಲ್ಲಿ ತಮ್ಮ ಮೊದಲ ಟೆಸ್ಟ್ ಶತಕ ಸಿಡಿಸಿದ್ದರೆ ಜಸ್ಪ್ರೀತ್ ಬುಮ್ರಾ ಆತಿಥೇಯರ ಐದು ವಿಕೆಟ್‌ಗಳನ್ನು ಕಬಳಿಸಿ ಮಿಂಚಿದ್ದರು.
ಇದಕ್ಕೆ ಮುನ್ನ ಟೀಂ ಇಡಿಯಾ ಅತಿಥೇಯ ವಿಂಡೀಸ್ ಗೆಲುವಿಗಾಗಿ 419 ರನ್ ಗುರಿ ನೀಡಿತ್ತು. ಆದರೆ ಗುರಿ ಬೆನ್ನತ್ತಿದ ವಿಂಡೀಸ್ ಪಡೆಯನ್ನು ಬುಮ್ರಾ ನೇತೃತ್ವದ ಭಾರತೀಯ ವೇಗಿಗಳು ಕನಿಷ್ಟ ಮೊತ್ತಕ್ಕೆ ಕಟ್ಟಿ ಹಾಕಿದ್ದರು.ನಾಲ್ಕನೇ ದಿನದ ಅಂತಿಮ ಇನ್ನಿಂಗ್ಸ್ ನಲ್ಲಿ ವಿಂಡೀಸ್ 26.5 ಓವರ್‌ಗಳಲ್ಲಿ ಕೇವಲ 100 ರನ್‌ಗಳಿಗೆ ಆಲೌಟ್ ಆಗಿದೆ.
ಬುಮ್ರಾ ಕೇವಲ ಏಳು ರನ್ ಗಳನ್ನು ನೀಡಿ ಐದು ವಿಕೆಟ್ ಪಡೆಇದ್ದರು.ಇದೇ ವೇಳೆ ವೃತ್ತಿ ಜೀವನದ ಹತ್ತನೇ ಟೆಸ್ಟ್ ಆಡಿದ ಬುಮ್ರಾ 50 ಟೆಸ್ಟ್ ವಿಕೆಟ್ ಪಡೆದ ವೇಗದ ಬೌಲರ್ ಎನಿಸಿಕೊಂಡರು.
ಇನ್ನು ಟೀಂ ಇಂಡಿಯಾ ಬೌಲರ್ ಗಳಾದ ಇಶಾಂತ್ ಶರ್ಮಾ (3/31) ಮತ್ತು ಮೊಹಮ್ಮದ್ ಶಮಿ (2/13) ವಿಕೆಟ್ ಪಡೆದರು. ಈ ಗೆಲುವಿನೊಡನೆ ಭಾರತ ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


