ಕೆಪಿಎಲ್ 2019: ದಾಖಲೆ ಬರೆದ ಭರತ್ ಚಿಪ್ಲಿ
ಹಾಲಿ ವರ್ಷದ ಕೆಪಿಎಲ್ ಟೂರ್ನಿಯಲ್ಲಿ ಬಿಜಾಪುರ ಬುಲ್ಸ್ ತಂಡದ ನಾಯಕ ಭರತ್ ಚಿಪ್ಲಿ ತಮ್ಮ ಅಮೋಘ ಪ್ರದರ್ಶನದ ಮೂಲಕ ದಾಖಲೆ ನಿರ್ಮಾಣ ಮಾಡಿದ್ದಾರೆ.

ಬೆಂಗಳೂರು: ಹಾಲಿ ವರ್ಷದ ಕೆಪಿಎಲ್ ಟೂರ್ನಿಯಲ್ಲಿ ಬಿಜಾಪುರ ಬುಲ್ಸ್ ತಂಡದ ನಾಯಕ ಭರತ್ ಚಿಪ್ಲಿ ತಮ್ಮ ಅಮೋಘ ಪ್ರದರ್ಶನದ ಮೂಲಕ ದಾಖಲೆ ನಿರ್ಮಾಣ ಮಾಡಿದ್ದಾರೆ.
ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್)ನಲ್ಲಿ ಸದ್ದಿಲ್ಲದೇ ರಾಜ್ಯದ ಪ್ರತಿಭೆಗಳು ಆರ್ಭಟಿಸುತ್ತಿದ್ದು, ಯಾವ ಐಪಿಎಲ್ ಟೂರ್ನಿಗೂ ಕಡಿಮೆ ಇಲ್ಲದ ರೀತಿಯಲ್ಲಿ ಕ್ರಿಕೆಟ್ ನಲ್ಲಿ ತಮ್ಮ ಅಮೋಘ ಪ್ರದರ್ಶನ ತೋರುತ್ತಿದ್ದಾರೆ. ಇದಕ್ಕೆ ಇಂಬು ನೀಡುವಂತೆ ಬಿಜಾಪುರ ಬುಲ್ಸ್ ತಂಡದ ನಾಯಕ ಭರತ್ ಚಿಪ್ಲಿ ತಮ್ಮ ಅಮೋಘ ಪ್ರದರ್ಶನದ ಮೂಲಕ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ.
ಹಾಲಿ ಟೂರ್ನಿಯಲ್ಲಿನ ಪ್ರದರ್ಶನವೂ ಸೇರಿದಂತೆ ಭರತ್ ಚಿಪ್ಲಿ, ಕೆಪಿಎಲ್ ಟೂರ್ನಿಯಲ್ಲಿ ಗರಿಷ್ಛ ರನ್ ಗಳಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಚಿಪ್ಲಿ ಒಟ್ಟಾರೆ ಕೆಪಿಎಲ್ ಟೂರ್ನಿಯಲ್ಲಿ 1420 ರನ್ ಗಳಿಸಿದ್ದು, ಇದು ಕೆಪಿಎಲ್ ಇತಿಹಾಸದಲ್ಲಿ ಗರಿಷ್ಠ ವೈಯುಕ್ತಿಕ ರನ್ ಗಳಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


