ಅಂಧರ ಕ್ರಿಕೆಟ್: ವೈಟ್ ವಾಷ್ ಸಾಧನೆ ಮಾಡಿದ ಭಾರತ
ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 126 ರನ್ ಗಳಿಂದ ನೇಪಾಳ ತಂಡವನ್ನು ಮಣಿಸಿ ವೈಟ್ ವಾಷ್ ಸಾಧನೆ ಮಾಡಿದೆ.

ಕಾನ್ಪುರ್: ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 126 ರನ್ ಗಳಿಂದ ನೇಪಾಳ ತಂಡವನ್ನು ಮಣಿಸಿ ವೈಟ್ ವಾಷ್ ಸಾಧನೆ ಮಾಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭ ಭರ್ಜರಿಯಾಗಿತ್ತು. ಲೋಕೇಶ್ ಹಾಗೂ ರವಿ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಈ ಜೋಡಿ ಅರ್ಧಶತಕ ಜೊತೆಯಾಟ ನೀಡಿತು. ಲೋಕೇಶ್ 24 ರನ್ ಗಳಿಗೆ ಔಟ್ ಆದರು. ರವಿ ಅವರು ಅಂಪೈರ್ ನೀಡಿದ ನಿರ್ಣಯಕ್ಕೆ ಬಲಿಯಾದರು. ರವಿ 46 ರನ್ ಗಳಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 254 ರನ್ ಪೇರಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ನೇಪಾಳ ಕೇವಲ 128 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ 126 ರನ್ ಗಳಿಗೆ ಭಾರತಕ್ಕೆ ಶರಣಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


