ಕ್ರಿಕೆಟ್

ವಿಕೆಟ್ ಕಿತ್ತು, ಸಂಭ್ರಮಾಚರಣೆ ವೇಳೆ ಬೌಲರ್ ಮಾಡಿದ ಮ್ಯಾಜಿಕ್ ವೈರಲ್!

ಕ್ರಿಕೆಟ್ ಅಂಗಳದಲ್ಲಿ ವಿಚಿತ್ರ ಸಂಭ್ರಮಾಚರಣೆ ಸಾಮಾನ್ಯ. ಆದರೆ ಇಲ್ಲೊಬ್ಬ ಬೌಲರ್ ವಿಕೆಟ್ ಕಿತ್ತು ಸಂಭ್ರಮದ ವೇಳೆ ಮ್ಯಾಜಿಕ್ ಮಾಡಿ ಪ್ರೇಕ್ಷಕರ ಗಮನ ಸೆಳೆದಿದ್ದಾರೆ.

ವಿಕೆಟ್ ಕಿತ್ತು, ಸಂಭ್ರಮಾಚರಣೆ ವೇಳೆ ಬೌಲರ್ ಮಾಡಿದ ಮ್ಯಾಜಿಕ್ ವೈರಲ್!
ಶಮ್ಸಿ ಮ್ಯಾಜಿಕ್
Published On :

ಪಾರ್ಲ್: ಕ್ರಿಕೆಟ್ ಅಂಗಳದಲ್ಲಿ ವಿಚಿತ್ರ ಸಂಭ್ರಮಾಚರಣೆ ಸಾಮಾನ್ಯ. ಆದರೆ ಇಲ್ಲೊಬ್ಬ ಬೌಲರ್ ವಿಕೆಟ್ ಕಿತ್ತು ಸಂಭ್ರಮದ ವೇಳೆ ಮ್ಯಾಜಿಕ್ ಮಾಡಿ ಪ್ರೇಕ್ಷಕರ ಗಮನ ಸೆಳೆದಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಎಂಝಾಂಸಿ ಸೂಪರ್ ಲೀಗ್ (ಎಂಎಸ್‍ಎಲ್) ಟೂರ್ನಿಯ ಟಿ20 ಪಂದ್ಯದಲ್ಲಿ ಪಾರ್ಲ್ ರಾಕ್ಸ್ ತಂಡದ ಬೌಲರ್ ತಬ್ರೇಜ್ ಶಮ್ಸಿ ಮ್ಯಾಜಿಕ್ ಮಾಡಿ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಪಾರ್ಲ್ ರಾಕ್ಸ್ ಮತ್ತು ಡರ್ಬನ್ ಹೀಟ್ ತಂಡಗಳ ನಡುವೆ ಪಂದ್ಯದ ವೇಳೆ ಡರ್ಬನ್ ಹೀಟ್ ತಂಡದ ವಿಹಾನ್ ಲಬ್ಬೆ ಶಮ್ಸಿ ಎಸೆತವನ್ನು ಬಲವಾಗಿ ಹೊಡೆಯಲು ಹೋಗಿ ಕ್ಯಾಚ್ ನೀಡಿ ಔಟಾದರು. ವಿಕೆಟ್ ಪಡೆದ ಸಂಭ್ರಮದಲ್ಲಿ ಶಮ್ಸಿ ಕೆಂಪು ಬಣ್ಣದ ಕರವಸ್ತ್ರವನ್ನು ತೆಗೆದು ಅದರಲ್ಲಿ ಬಿಳಿ ಬಣ್ಣದ ದಂಡವನ್ನು ಹೊರ ತೆಗೆಯುವ ಮೂಲಕ ಜಾದು ಮಾಡಿ ಸಂಭ್ರಮಿಸಿ ಅಭಿಮಾನಿಗಳನ್ನು ರಂಜಿಸಿದ್ದಾರೆ. 

ಶಮ್ಸಿ ಜಾದೂ ವಿಡಿಯೋ ಇದೀಗ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶಮ್ಸಿ ಜಾದೂಗೆ ಕ್ರಿಕೆಟ್ ಅಭಿಮಾನಿಗಳು ಫಿದಾ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.