ಟೀಂ ಇಂಡಿಯಾ ಆಟಗಾರರ ವಿರುದ್ಧ ಗುಡುಗಿದ ಯುವರಾಜ್ ಸಿಂಗ್!
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಟೀಂ ಇಂಡಿಯಾ ಆಟಗಾರರ ವಿರುದ್ಧ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಕಿಡಿಕಾರಿದ್ದಾರೆ.

ಹೈದರಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಟೀಂ ಇಂಡಿಯಾ ಆಟಗಾರರ ವಿರುದ್ಧ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಕಿಡಿಕಾರಿದ್ದಾರೆ.
ವಿಂಡೀಸ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ಫೀಲ್ಡಿಂಗ್ ಭಾರೀ ಬಡವಾಗಿತ್ತು. ಕಳಪೆ ಫೀಲ್ಡಿಂಗ್ ನಿಂದಾಗಿ ವೆಸ್ಟ್ ಇಂಡೀಸ್ ತಂಡ 200ರ ಗಡಿದಾಟ್ಟಿತ್ತು. ಇದರಿಂದಾಗಿ ಭಾರತಕ್ಕೆ ಗೆಲುವು ಸವಾಲಿನದಾಗಿತ್ತು ಎಂದು ಯುವರಾಜ್ ಸಿಂಗ್ ಗುಡುಗಿದ್ದಾರೆ.
ಮೊದಲು ಬ್ಯಾಟಿಂಗ್ ಮಾಡಿದ್ದ ವೆಸ್ಟ್ ಇಂಡೀಸ್ ನಿಗದಿತ ಓವರ್ ನಲ್ಲಿ 207 ರನ್ ಗಳನ್ನು ಪೇರಿಸಿತ್ತು. 208 ರನ್ ಗುರಿ ಬೆನ್ನಟ್ಟಿದ ಭಾರತ ಇನ್ನು 8 ಎಸೆತ ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


