ಸಿಕ್ಸ್ ಬಾರಿಸಿ ಕೊಹ್ಲಿ 'ನೋಟ್‌ಬುಕ್‌ನಲ್ಲಿ' ಬರೆದು ಬೌಲರ್‌ಗೆ ಎಚ್ಚರಿಕೆ ಕೊಟ್ಟಿದ್ದೇನು? ವಿಡಿಯೋ ವೈರಲ್!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಮ್ಮನ್ನು ಹೀಯಾಳಿಸಿದವರನ್ನು ಅಷ್ಟು ಸುಲಭಕ್ಕೆ ಮರೆಯುವುದಿಲ್ಲ ಎನ್ನುವುದಕ್ಕೆ ಇದೇ ಸಾಕ್ಷಿ. ಹೌದು ಹಳೆಯ ಪಂದ್ಯವೊಂದರಲ್ಲಿ ವಿಂಡೀಸ್ ಬೌಲರ್ ಕೊಹ್ಲಿ ವಿಕೆಟ್ ಪಡೆದು ಹೀಯಾಳಿಸಿದ್ದಕ್ಕೆ...

ಹೈದರಾಬಾದ್: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಮ್ಮನ್ನು ಹೀಯಾಳಿಸಿದವರನ್ನು ಅಷ್ಟು ಸುಲಭಕ್ಕೆ ಮರೆಯುವುದಿಲ್ಲ ಎನ್ನುವುದಕ್ಕೆ ಇದೇ ಸಾಕ್ಷಿ. ಹೌದು ಎರಡು ವರ್ಷಗಳ ಹಿಂದೆ ವಿಂಡೀಸ್ ಬೌಲರ್ ಕೊಹ್ಲಿ ವಿಕೆಟ್ ಪಡೆದು ಹೀಯಾಳಿಸಿದ್ದಕ್ಕೆ ನಿನ್ನೆಯ ಪಂದ್ಯದಲ್ಲಿ ವೀರಾವೇಶದ ಪ್ರದರ್ಶನ ನೀಡಿ ಬೌಲರ್ ಬೆವರಿಳಿಸಿರುವ ವಿಡಿಯೋ ವೈರಲ್ ಆಗಿದೆ.
2017ರಲ್ಲಿ ವಿಂಡೀಸ್ ಪ್ರವಾಸದಲ್ಲಿ ಜಮೈಕಾ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ವಿರಾಟ್ ಕೊಹ್ಲಿಯ ವಿಕೆಟ್ ಪಡೆದಿದ್ದ ವಿಲಿಯಮ್ಸ್ ಅಂದು ನೋಟ್ ಬುಕ್ ನಲ್ಲಿ ಬರೆದಿಡುವಂತೆ ಸನ್ಹೆ ಮಾಡಿದ್ದರು. ಇದಾದ ಎರಡು ವರ್ಷಗಳ ಬಳಿಕ ವಿಲಿಯಮ್ಸ್ ಗೆ ಭರ್ಜರಿ ಸಿಕ್ಸರ್ ಬಾರಿಸಿದ ಕೊಹ್ಲಿ ಅದೇ ನೋಟ್ ಬುಕ್ ಸನ್ಹೆ ಮೂಲಕ ತಿರುಗೇಟು ನೀಡಿದ್ದಾರೆ.
ವಿಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 50 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 6 ಬೌಂಡರಿ ಸೇರಿದಂತೆ ಅಜೇಯ 94 ರನ್ ಪೇರಿಸಿ ತಂಡಕ್ಕೆ ಗೆಲುವಿನ ಸಿಹಿ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


