ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ; ಗಾಯಾಳು ಧವನ್ ಔಟ್, ಮಯಾಂಕ್ ಅಗರ್ವಾಲ್ ಇನ್!
ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ ಮಾಡಲಾಗಿದ್ದು, ಮೊಣಕಾಲು ಗಾಯದಿಂದ ಬಳಲುತ್ತಿರುವ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸಮನ್ ಶಿಖರ್ ಧವನ್ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅಗರ್ವಾಲ್ ರನ್ನು ಆಯ್ಕೆ ಮಾಡಲಾಗಿದೆ.

ನವದೆಹಲಿ: ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ ಮಾಡಲಾಗಿದ್ದು, ಮೊಣಕಾಲು ಗಾಯದಿಂದ ಬಳಲುತ್ತಿರುವ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸಮನ್ ಶಿಖರ್ ಧವನ್ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅಗರ್ವಾಲ್ ರನ್ನು ಆಯ್ಕೆ ಮಾಡಲಾಗಿದೆ.
ಇದೇ ಡಿಸೆಂಬರ್ 15 ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ತಂಡದಿಂದ ಗಾಯಾಳು ಶಿಖರ್ ಧವನ್ ಅವರನ್ನು ಕೈ ಬಿಡಲಾಗಿದೆ. ಅವರ ಬದಲಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ರನ್ನು ಆಯ್ಕೆ ಮಾಡಲಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡ ಒಟ್ಟು ಮೂರು ಏಕದಿನ ಪಂದ್ಯಗಳನ್ನಾಡಲಿದ್ದು, ಮೊದಲನೇ ಪಂದ್ಯ ಡಿಸೆಂಬರ್ 15 ರಂದು ಚೆನ್ನೈ ನಲ್ಲಿ, ಎರಡನೇ ಪಂದ್ಯ ಡಿ.18 ರಂದು ವಿಶಾಖಪಟ್ಟಣಂ ನಲ್ಲಿ ಹಾಗೂ ಕೊನೆಯ ಪಂದ್ಯ ಡಿ.22 ರಂದು ಕಟಕ್‌ನಲ್ಲಿ ಜರುಗಲಿದೆ.
ಈ ಹಿಂದೆ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಪಂದ್ಯದ ವೇಳೆ ಎಡಗೈ ಆರಂಭಿಕ ಶಿಖರ್ ಧವನ್ ಅವರ ಮೊಣಕಾಲಿಗೆ ಗಾಯವಾಗಿತ್ತು. ಹಾಗಾಗಿ, ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಗೆ ಅವರ ಸ್ಥಾನಕ್ಕೆ ಸಂಜು ಸ್ಯಾಮ್ಸನ್ ಗೆ ಅವಕಾಶ ಕಲ್ಪಿಸಲಾಗಿತ್ತು. ಆ ಬಳಿಕ ಧವನ್ ವಿಂಡೀಸ್ ವಿರುದ್ಧದ ಏಕದಿನ ಸರಣಿ ಹೊತ್ತಿಗೆ ಚೇತರಿಸಿಕೊಳ್ಳುವ ವಿಶ್ವಾಸವಿತ್ತಾದರೂ, ಅದು ಸಾಧ್ಯವಾಗದ ಹಿನ್ನಲೆಯಲ್ಲಿ ಅವರ ಬದಲಿಗೆ ಮಯಾಂಕ್ ಅಗರ್ವಾಲ್ ಅವರಿಗೆ ಅವಕಾಶ ನೀಡಲಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಇಂತಿದೆ.
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಮಾಯಾಂಕ್ ಅಗರ್ವಾಲ್, ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ಶಿವಂ ದುಬೆ, ಕೇದಾರ್ ಜಾಧವ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ದೀಪಕ್ ಚಹರ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


