ವಿಂಡೀಸ್ ವಿರುದ್ಧ ಏಕದಿನ ಸರಣಿ: ಭುವಿ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಸ್ಥಾನ
ಪ್ರಮುಖ ಬೆಳವಣಿಗೆಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು, ವೇಗಿ ಭುವನೇಶ್ವರ್ ಕುಮಾರ್ ಬದಲಿಗೆ ಉದಯೋನ್ಮುಖ ಆಟಗಾರ ಶಾರ್ದೂಲ್ ಠಾಕೂರ್ ಗೆ ಸ್ಥಾನ ನೀಡಲಾಗಿದೆ.

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು, ವೇಗಿ ಭುವನೇಶ್ವರ್ ಕುಮಾರ್ ಬದಲಿಗೆ ಉದಯೋನ್ಮುಖ ಆಟಗಾರ ಶಾರ್ದೂಲ್ ಠಾಕೂರ್ ಗೆ ಸ್ಥಾನ ನೀಡಲಾಗಿದೆ.
ಪ್ರಸ್ತುತ ಭಾರತ ಪ್ರವಾಸದಲ್ಲಿರುವ ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ಗೆದ್ದು ಬೀಗಿರುವ ಕೊಹ್ಲಿ ಪಡೆ ಇದೀಗ ಏಕದಿನ ಸರಣಿ ಮೇಲೆ ಕಣ್ಣಿಟ್ಟಿದೆ. ಇದೇ ಡಿಸೆಂಬರ್ 15 ಭಾನುವಾರ ಭಾರತ ತಂಡ ವಿಂಡೀಸ್ ವಿರುದ್ಧ ತನ್ನ ಮೊದಲ ಪಂದ್ಯವನ್ನಾಡಲಿದೆ. ಚೆನ್ನೈ ನಲ್ಲಿ ನಡೆಯಲಿರುವ ಮೊದಲ ಪಂದ್ಯ ನಡೆಯಲಿದ್ದು, ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ ಸಮಿತಿ ತಂಡ ಪ್ರಕಟ ಮಾಡಿದೆ.
ಭಾರತ ತಂಡದ ಪ್ರಮುಖ ವೇಗಿ ಭುವನೇಶ್ವರ್ ಕುಮಾರ್ ಗೆ ವಿಂಡೀಸ್ ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಭುವಿ ಬದಲಿಗೆ ಉದಯೋನ್ಮುಖ ಆಟಗಾರ ಶಾರ್ದೂಲ್ ಠಾಕೂರ್ ಗೆ ಸ್ಥಾನ ಕಲ್ಪಿಸಲಾಗಿದೆ.
ತಂಡ ಇಂತಿದೆ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಮಾಯಾಂಕ್ ಅಗರ್ವಾಲ್, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ಶಿವಮ್ ದುಬೆ, ಕೇದಾರ್ ಜಾಧವ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ದೀಪಕ್ ಚಹರ್, ಮೊಹಮ್ಮದ್ ಶಮಿ, ಶಾರ್ದುಲ್ ಠಾಕೂರ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


