ಕ್ರಿಕೆಟ್

ಮೊದಲ ಏಕದಿನ ಪಂದ್ಯ: ಹೆಟ್ಮರ್, ಹೋಪ್ ಭರ್ಜರಿ ಶತಕ, ಟೀಂ ಇಂಡಿಯಾಗೆ ಸೋಲು!

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಗೆದ್ದು ಬೀಗಿದ್ದ ಟೀಂ ಇಂಡಿಯಾ ಇದೀಗ ಮೊದಲ ಏಕದಿನ ಪಂದ್ಯದಲ್ಲಿ ಸೋಲು ಕಂಡಿದೆ.

ಮೊದಲ ಏಕದಿನ ಪಂದ್ಯ: ಹೆಟ್ಮರ್, ಹೋಪ್ ಭರ್ಜರಿ ಶತಕ, ಟೀಂ ಇಂಡಿಯಾಗೆ ಸೋಲು!
ಭಾರತ-ವಿಂಡೀಸ್
Published On :

ಚೆನ್ನೈ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಗೆದ್ದು ಬೀಗಿದ್ದ ಟೀಂ ಇಂಡಿಯಾ ಇದೀಗ ಮೊದಲ ಏಕದಿನ ಪಂದ್ಯದಲ್ಲಿ ಸೋಲು ಕಂಡಿದೆ. 

ಚೆನ್ನೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 8 ವಿಕೆಟ್ ಕಳೆದುಕೊಂಡು 287 ರನ್ ಪೇರಿಸಿತ್ತು. 288 ರನ್ ಗಳ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ 2 ವಿಕೆಟ್ ನಷ್ಟಕ್ಕೆ 291 ರನ್ ಪೇರಿಸಿ ಗೆಲುವಿನ ನಗೆ ಬೀರಿದೆ. 

ಹೆಟ್ಮರ್ ಮತ್ತು ಹೋಪ್ ಭರ್ಜರಿ ಶತಕ ವೆಸ್ಟ್ ಇಂಡೀಸ್ ಮೊದಲ ಏಕದಿನ ಪಂದ್ಯದಲ್ಲಿ ತಂಡ ಗೆಲುವಿನ ನಗೆ ಬೀರಲು ಸಾಧ್ಯವಾಯಿತು. 

ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 36, ಶ್ರೇಯಸ್ ಅಯ್ಯರ್ 70, ರಿಷಬ್ ಪಂತ್ 71 ಮತ್ತು ಕೇದಾರ್ ಜಾದವ್ 40 ರನ್ ಬಾರಿಸಿದ್ದಾರೆ. 

ವಿಂಡೀಸ್ ಪರ ಹೆಟ್ಮರ್ 139 ರನ್ ಮತ್ತು ಶಾಹಿ ಹೋಪ್ ಅಜೇಯ 102 ರನ್ ಪೇರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.