ವಿಂಡೀಸ್ ವಿರುದ್ಧ ಭರ್ಜರಿ ಶತಕ, ಈ ದಾಖಲೆ ಬರೆದ ಏಕೈಕ ಆಟಗಾರ ಹಿಟ್ ಮ್ಯಾನ್ ರೋಹಿತ್!
ವಿಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅಪರೂಪದ ದಾಖಲೆ ನಿರ್ಮಾಣ ಮಾಡಿದ್ದಾರೆ.

ವಿಶಾಖಪಟ್ಟಣಂ: ವಿಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅಪರೂಪದ ದಾಖಲೆ ನಿರ್ಮಾಣ ಮಾಡಿದ್ದಾರೆ.
ಹೌದು.. ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದರು. ಕೇವಲ 138 ಎಸೆತಗಳಲ್ಲಿ 159 ರನ್ ಗಳಿಸಿದ ರೋಹಿತ್ ಈ ಮೂಲಕ ಅಪರೂಪದ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ. ಅವರ ಈ ಭರ್ಜರಿ ಆಟದಲ್ಲಿ ಐದು ಸಿಕ್ಸರ್ ಮತ್ತು 17 ಬೌಂಡರಿಗಳಿದ್ದವು.
ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಅತೀ ಹೆಚ್ಚು 150ಕ್ಕೂ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಒಟ್ಟು 220 ಏಕದಿನ ಪಂದ್ಯವನ್ನಾಡಿರುವ ರೋಹಿತ್ ಶರ್ಮಾ 28 ಶತಕ ಸಿಡಿಸಿದ್ದಾರೆ. ಅಂತೆಯೇ 8 ಬಾರಿ 150ಕ್ಕೂ ಅಧಿಕ ರನ್ ಗಳಿಸಿದ್ದಾರೆ.
ಇನ್ನು ರೋಹಿತ್ ಶರ್ಮಾ ಬಳಿಕದ ಸ್ಥಾನದಲ್ಲಿ ಆಸಿಸ್ ನ ಡೇವಿಡ್ ವಾರ್ನರ್ ಇದ್ದು, ವಾರ್ನರ್ 6 ಬಾರಿ ಈ ಸಾಧನೆ ಗೈದಿದ್ದಾರೆ. ಅಂತೆಯೇ ಭಾರತ ಸಚಿನ್ ತೆಂಡೂಲ್ಕರ್ ಮತ್ತು ವೆಸ್ಟ್ ಇಂಡೀಸ್ ನ ಕ್ರಿಸ್ ಗೇಯ್ಲ್ ಜಂಟಿ ಮೂರನೇ ಸ್ಥಾನದಲ್ಲಿದ್ದು ಇಬ್ಬರೂ ತಲಾ ಐದು ಬಾರಿ ಈ ಸಾಧನೆ ಗೈದಿದ್ದಾರೆ.
Related Article
ದಾಖಲೆಯ ಪಂದ್ಯದಲ್ಲಿ ಗೋಲ್ಡನ್ ಡಕ್ ಗೆ ಬಲಿಯಾದ ಕೊಹ್ಲಿ, ಇಷ್ಟಕ್ಕೂ ಆ ದಾಖಲೆ ಯಾವುದು ಗೊತ್ತಾ?
2ನೇ ಏಕದಿನ: ರೋಹಿತ್ ಶರ್ಮಾ ಭರ್ಜರಿ ಶತಕ, ದಾಖಲೆ ನಿರ್ಮಾಣ
2ನೇ ಏಕದಿನ ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ವಿಂಡೀಸ್ ಬೌಲಿಂಗ್ ಆಯ್ಕೆ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


