5 ಎಸೆತಗಳಲ್ಲಿ 6, 6, 4, 6, 6 ರನ್, ಶ್ರೇಯಸ್ ಅಯ್ಯರ್ ಸ್ಫೋಟಕ ಬ್ಯಾಟಿಂಗ್, ವಿಡಿಯೋ ವೈರಲ್!
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.

ವಿಶಾಖಪಟ್ಟಣಂ: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತ್ತು. ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿ ತಂಡ ಬೃಹತ್ ಮೊತ್ತ ಪೇರಿಸಲು ಕಾರಣರಾದರು. ಇನ್ನು ಕೊನೆಯಲ್ಲಿ ಬ್ಯಾಟಿಂಗ್ ಮಾಡಿದ ಶ್ರೇಯಸ್ ಅಯ್ಯರ್ 32 ಎಸೆತಗಳಲ್ಲಿ 53 ರನ್ ಪೇರಿಸಿದರು.
47ನೇ ಓವರ್ ಅನ್ನು ವೆಸ್ಟ್ ಇಂಡೀಸ್ ಬೌಲರ್ ಚೇಸ್ ಬೌಲಿಂಗ್ ಮಾಡಿದ್ದು ಕೊನೆಯ ಐದು ಎಸೆತಗಳಲ್ಲಿ ಶ್ರೇಯಸ್ ಅಯ್ಯರ್ 6, 6, 4, 6, 6 ರನ್ ಬಾರಿಸಿದರು. ಇದರೊಂದಿಗೆ ತಂಡ ಬೃಹತ್ ಮೊತ್ತ ಪೇರಿಸಲು ಸಾಧ್ಯವಾಯಿತು.
ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 387 ಬೃಹತ್ ಮೊತ್ತ ಪೇರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


