ವಿಂಡೀಸ್ ವಿರುದ್ಧ ಭರ್ಜರಿ ಶತಕ: ಲಂಕಾ ದಿಗ್ಗಜ ಜಯಸೂರ್ಯ ದಾಖಲೆ ಸರಿಗಟ್ಟಿದ 'ಹಿಟ್ ಮ್ಯಾನ್' ರೋಹಿತ್
ವಿಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿ ಆಕರ್ಷಕ ಶತಕ ಸಿಡಿಸಿದ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಶ್ರೀಲಂಕಾದ ದಿಗ್ಗಜ ಆಟಗಾರ ಜಯಸೂರ್ಯ ಅವರ ದಾಖಲೆ ಸರಿಗಟ್ಟಿದ್ದಾರೆ.

ನವದೆಹಲಿ: ವಿಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿ ಆಕರ್ಷಕ ಶತಕ ಸಿಡಿಸಿದ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಶ್ರೀಲಂಕಾದ ದಿಗ್ಗಜ ಆಟಗಾರ ಜಯಸೂರ್ಯ ಅವರ ದಾಖಲೆ ಸರಿಗಟ್ಟಿದ್ದಾರೆ.
ನಿನ್ನೆ ವಿಶಾಖಪಟ್ಟಣಂನಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದರು. ಕೇವಲ 138 ಎಸೆತಗಳಲ್ಲಿ 159 ರನ್ ಗಳಿಸಿದ ರೋಹಿತ್ ಶರ್ಮಾ, ತಮ್ಮ ಶತಕಗಳ ಸಂಖ್ಯೆಯನ್ನು 28ಕ್ಕೆ ಏರಿಕೆ ಮಾಡಿಕೊಂಡರು. ಆ ಮೂಲಕ ಶ್ರೀಲಂಕಾದ ಲೆಜೆಂಡ್ ಆಟಗಾರ ಸನತ್ ಜಯಸೂರ್ಯ ಅವರ ದಾಖಲೆಯನ್ನು ರೋಹಿತ್ ಶರ್ಮಾ ಸರಿಗಟ್ಟಿದ್ದಾರೆ.
ಇದು ರೋಹಿತ್ ಶರ್ಮಾ ಅವರ 220 ನೇ ಏಕದಿನ ಪಂದ್ಯವಾಗಿದೆ. ಈ ಪಂದ್ಯಗಳಲ್ಲಿ ಅವರು 28 ಶತಕಗಳನ್ನು ಗಳಿಸಿದ್ದಾರೆ. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ 27 ಶತಕಗಳನ್ನು ಬಾರಿಸಿದ ಹಶಿಮ್ ಆಮ್ಲಾ ಅವರನ್ನು ಹಿಂದಿಕ್ಕಿದ್ದಾರೆ. ರೋಹಿತ್ ಶರ್ಮಾ ಈಗ ಹೆಚ್ಚು ಶತಕಗಳಿಸಿದ ದಾಖಲೆ ನಿರ್ಮಿಸಿರುವ ಶ್ರೀಲಂಕಾದ ಸನತ್ ಜಯಸೂರ್ಯ (28) ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈಗ 'ಹಿಟ್‌ಮ್ಯಾನ್' ರೋಹಿತ್ ಶರ್ಮಾರ ಮುಂದಿನ ಗುರಿ ರಿಕಿ ಪಾಂಟಿಂಗ್. ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಏಕದಿನ ಕ್ರಿಕೆಟ್‌ನಲ್ಲಿ 30 ಶತಕಗಳನ್ನು ಬಾರಿಸಿದ್ದಾರೆ.
ಏಕದಿನ ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕ ಗಳಿಸುವ ದೃಷ್ಟಿಯಿಂದ ರೋಹಿತ್ ಶರ್ಮಾ ಈಗ ಜಂಟಿಯಾಗಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮತ್ತು ರಿಕಿ ಪಾಂಟಿಂಗ್ ಮಾತ್ರ ಅವರಿಗಿಂತ ಹೆಚ್ಚು ಶತಕಗಳನ್ನು ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ 49 ಶತಕಗಳ ವಿಶ್ವ ದಾಖಲೆಯನ್ನು ಹೊಂದಿದ್ದಾರೆ. ವಿರಾಟ್ ಕೊಹ್ಲಿ 43 ಶತಕಗಳನ್ನು ಬಾರಿಸಿದ್ದಾರೆ. ರಿಕಿ ಪಾಂಟಿಂಗ್ 30 ಶತಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
Related Article
ಹ್ಯಾಟ್ರಿಕ್ ವಿಕೆಟ್ ಪಡೆದ ಖುಷಿಯಲ್ಲಿ ತಾಹಿರ್ ರೀತಿ ಮೈದಾನದಲ್ಲೆಲ್ಲಾ ಓಡಾಡಿದ ಕುಲ್‍ದೀಪ್, ವಿಡಿಯೋ ವೈರಲ್!
ಶ್ರೇಯಸ್ ಅಯ್ಯರ್ ಬ್ರಿಲಿಯಂಟ್ ಫೀಲ್ಡಿಂಗ್: ಹೆಟ್ಮರ್ ಅದ್ಭುತ ರನೌಟ್, ವಿಡಿಯೋ ವೈರಲ್!
2ನೇ ಏಕದಿನ ಪಂದ್ಯ: ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ 107 ರನ್‍ಗಳಿಂದ ಗೆದ್ದು ಬೀಗಿದ ಟೀಂ ಇಂಡಿಯಾ!
5 ಎಸೆತಗಳಲ್ಲಿ 6, 6, 4, 6, 6 ರನ್, ಶ್ರೇಯಸ್ ಅಯ್ಯರ್ ಸ್ಫೋಟಕ ಬ್ಯಾಟಿಂಗ್, ವಿಡಿಯೋ ವೈರಲ್!
ರೋ'ಹಿಟ್', ರಾಹುಲ್ ಭರ್ಜರಿ ಜೊತೆಯಾಟ, ಪಂತ್ ಆರ್ಭಟ, ವಿಂಡೀಸ್ ಗೆ ಬೃಹತ್ ಗುರಿ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


