ಕಿರಿಯರ ತಂಡ ಶ್ರೇಷ್ಠ ಪ್ರದರ್ಶನ ನೀಡಿ ಪಟ್ಟ ಉಳಿಸಿಕೊಳ್ಳಲಿದೆ: ರೋಹಿತ್ ಶರ್ಮಾ
ಹಾಲಿ ವಿಶ್ವ ಚಾಂಪಿಯನ್ ಭಾರತ ತಂಡ, ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ಪಟ್ಟವನ್ನು ಉಳಿಸಿಕೊಳ್ಳಲಿದೆ ಎಂದು ಟೀಮ್ ಇಂಡಿಯಾದ ಉಪನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಮುಂಬೈ: ಹಾಲಿ ವಿಶ್ವ ಚಾಂಪಿಯನ್ ಭಾರತ ತಂಡ, ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ಪಟ್ಟವನ್ನು ಉಳಿಸಿಕೊಳ್ಳಲಿದೆ ಎಂದು ಟೀಮ್ ಇಂಡಿಯಾದ ಉಪನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.
ಕಿರಿಯರ ವಿಶ್ವಕಪ್ ಟೂರ್ನಿಯಲ್ಲಿ ಒಟ್ಟಾರೆ 16 ತಂಡಗಳು ಭಾಗವಹಿಸಲಿವೆ. ಜನವರಿ 17 ರಿಂದ ಟೂರ್ನಿ ಆಫ್ರಿಕಾದಲ್ಲಿ ನಡೆಹಯಲಿದೆ. ಭಾರತ “ಎ” ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಜಪಾನ್, ನ್ಯೂಜಿಲೆಂಡ್, ಶ್ರೀಲಂಕಾ ತಂಡದ ವಿರುದ್ಧ ಹೋರಾಟ ನಡೆಸಲಿದೆ.
“ನಮ್ಮ ತಂಡ ಬಲಾಢ್ಯವಾಗಿದೆ. ನಮಗೆ ಹಾಲಿ ಚಾಂಪಿಯನ್ ಎಂಬ ಪಟ್ಟವಿದೆ. ಈ ಬಾರಿಯೂ ನಮ್ಮ ತಂಡ ಕಪ್ ಗೆಲ್ಲಲಿದೆ. ಶ್ರೇಷ್ಠ ಪ್ರದರ್ಶನ ನೀಡಿ ಟ್ರೋಫಿಗೆ ಮುತ್ತಿಡಲು ಭಾರತ ಪ್ಲಾನ್ ಮಾಡಿಕೊಂಡಿದೆ” ಎಂದು ರೋಹಿತ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


