ಮೈದಾನದಲ್ಲೇ ವಾಗ್ವಾದ ನಡೆಸಿದ ಇಂಗ್ಲೆಂಡ್ ಆಟಗಾರರು, ವಿಡಿಯೋ ವೈರಲ್!
ಪ್ರವಾಸಿ ಇಂಗ್ಲೆಂಡ್ ತಂಡದ ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೈದಾನದಲ್ಲೇ ವಾಗ್ವಾದ ನಡೆಸಿದ್ದಾರೆ.

ಸೆಂಚುರಿಯನ್: ಪ್ರವಾಸಿ ಇಂಗ್ಲೆಂಡ್ ತಂಡದ ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೈದಾನದಲ್ಲೇ ವಾಗ್ವಾದ ನಡೆಸಿದ್ದಾರೆ.
2019ರ ವಿಶ್ವಕಪ್ ಚಾಂಪಿಯನ್ ಆಗಿರುವ ಇಂಗ್ಲೆಂಡ್ ತಂಡ ವರ್ಷಾಂತ್ಯದ ಕಳಪೆ ಆಟದಿಂದಾಗಿ ಅತೀವ ಒತ್ತಡಕ್ಕೊಳಗಾಗಿದೆ. ಅಲ್ಲದೆ ತಂಡದಲ್ಲೇ ಒಳಜಗಳ ಶುರುವಾಗಿದೆ. ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ಉಪನಾಯಕ ಬೆನ್ ಸ್ಟೋಕ್ಸ್ ಹಾಗೂ ಅನುಭವಿ ವೇಗದ ಬೌಲರ್ ಸ್ಟುವರ್ಟ್ ಬ್ರಾಡ್ ಪರಸ್ಪರ ವಾಗ್ವಾದಕ್ಕಿಳಿದಿದ್ದರು.
ಈ ಇಬ್ಬರು ಆಟಗಾರರು ಮೈದಾನದಲ್ಲಿ ವಾಗ್ವಾದಕ್ಕಿಳಿದಿದ್ದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ವಿಡಿಯೋದಲ್ಲಿ ಮಾತ್ರ ಬೆನ್ ಸ್ಟೋಕ್ಸ್ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


